Wednesday, August 17, 2022
spot_img
Homeರಾಜ್ಯಫಾಜಿಲ್‌ ಹತ್ಯೆ ಸಿಎಂ ಮುಖಕ್ಕೆ ಮಂಗಳಾರತಿ: ಸಿದ್ದರಾಮಯ್ಯ ಟೀಕೆ

ಫಾಜಿಲ್‌ ಹತ್ಯೆ ಸಿಎಂ ಮುಖಕ್ಕೆ ಮಂಗಳಾರತಿ: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಕಳೆದ ರಾತ್ರಿ ಮಂಗಳೂರು ಹೊರವಲಯ ಸುರತ್ಕಲ್‌ನಲ್ಲಿ ಫಾಜಿಲ್ ಮಂಗಲಪೇಟೆ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಇದು ನಡೆದಿರುವುದು ನೋಡಿದರೆ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ ಎಂಬುದು ಗೊತ್ತಾಗುತ್ತದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ಟೀಕಿಸಿದ್ದಾರೆ.
ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಅಸಮರ್ಥ ಸರ್ಕಾರಕ್ಕೆ ಜನರಿಗೆ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ, ಇದರ ಹೊಣೆಯನ್ನು ಸಿಎಂ ಬೊಮ್ಮಾಯಿ ಮತ್ತು ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಹೊತ್ತುಕೊಂಡು ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!