ಧರ್ಮಾಧಾರಿತ ದ್ವೇಷ ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ : ಅಜಿತ್ ದೋವಲ್‌

ನವದೆಹಲಿ : ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಕೆಲವರು ಹಗೆತನ ಸೃಷ್ಟಿಸುತ್ತಿದ್ದಾರೆ. ಇದು ಇಡೀ ದೇಶದ ಮೇಲೆ ಪರಿಣಾಮ ಬಿರುತ್ತಿದೆ. ಇದನ್ನು ತಡೆಯಲು ಧಾರ್ಮಿಕ ಮುಖಂಡರು ಜತೆಯಾಗಿ ಕಾರ್ಯನಿರ್ವಹಿಸುವುದು ಅಗತ್ಯವೆಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹೇಳಿದ್ದಾರೆ. ಅವರು ಶನಿವಾರ ನವದೆಹಲಿಯಲ್ಲಿ ಎಐಎಸ್‌ಎಸ್‌ಸಿ ಮಂಡಳಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌’ನಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಮ್ಮೇಳನದಲ್ಲಿ ಧಾರ್ಮಿಕ ಮುಖಂಡರ ಸಮಕ್ಷಮದಲ್ಲಿ ಮಾತನಾಡಿದರು.
ಎಲ್ಲ ಧರ್ಮದವರೂ ಭಾರತದ ಭಾಗವೆನ್ನುವುದನ್ನು ಮನಗಾಣಬೇಕು. ಸಮಾಜದಲ್ಲಿ ತಪ್ಪು ತಿಳಿವಳಿಕೆಗಳನ್ನು ದೂರ ಮಾಡಲು ಪ್ರಯತ್ನಿಸಬೇಕಿದೆ. ಕೆಲವರು ಧರ್ಮದ ಹೆಸರಿನಲ್ಲಿ ಹಗೆತನ ಬಿತ್ತುತ್ತಿದ್ದು, ಅದು ಇಡೀ ರಾಷ್ಟ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದಕ್ಕೆ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. ಇದರ ತಡೆಗೆ ನಾವೆಲ್ಲ ಜತೆಯಾಗಿ ಕೆಲಸ ಮಾಡಬೇಕೆಂದು ದೋವಲ್‌ ಹೇಳಿದರು.





























































































































































































































error: Content is protected !!
Scroll to Top