ಶಿವಸೇನೆ ನಾಯಕ ಸಂಜಯ್‌ ರಾವತ್‌ ಮನೆ ಮೇಲೆ ಇ.ಡಿ.ದಾಳಿ

ಮುಂಬಯಿ: ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇ.ಡಿ. ಅವರ ವಿಚಾರಣೆ ನಡೆಸಿತ್ತು.
ಭಾನುವಾರ ಬೆಳಗ್ಗೆ ಮುಂಬಯಿಯಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ಇ.ಡಿ. ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಲಾಗಿದೆ.
ಎರಡು ಬಾರಿ ರಾವತ್‌ ಇ.ಡಿ. ವಿಚಾರಣೆಗೆ ಗೈರಾಗಿದ್ದರು. ಜುಲೈ 27ರಂದು ಅವರು ಇಡಿ ಮುಂದೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ಅಂದಾಜಿಸಲಾಗಿದೆ.
ದಾಳಿ ವೇಳೆ ಭದ್ರತೆಗಾಗಿ ಈ.ಡಿ.ಅಧಿಕಾರಿಗಳು ಸಿಆರ್‌ಪಿಎಫ್ ಯೋಧರನ್ನು ಅಧಿಕಾರಿಗಳು ಕರೆತಂದಿದ್ದಾರೆ. ಸಂಜಯ್ ರಾವತ್ ಶಿವಸೇನೆಯ ಪ್ರಭಾವಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯ ಬಲಗೈ ಬಂಟರಾಗಿರುವುದರಿಂದ ಶಿವಸೇನೆ ಉದ್ಧವ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಭದ್ರತೆ ಹೆಚ್ಚಿಸಲಾಗಿದೆ.
ಪತ್ರಾ ಚಾಲ್ ಭೂ ಹಗರಣ ಸಂಬಂಧ ಇಡಿ ವಿಚಾರಣೆಗೆ ನೋಟಿಸ್ ನೀಡಿದಾಗಲೇ ಸಂಜಯ್ ರಾವತ್ ಇದು ರಾಜಕೀಯ ಪ್ರೇರಿತ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದರು.
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ, ಶಿವಸೇನೆ ನೇತೃತ್ವದ ಸರ್ಕಾರ ಆಸ್ತಿತ್ವಕ್ಕೆ ಬಂದಿದೆ.ಅದರ ಬೆನ್ನಿಗೆ ಸಂಜಯ್‌ ರಾವತ್‌ಗೆ ಇ.ಡಿ.ದಾಳಿಯ ಬಿಸಿ ತಟ್ಟಿದೆ.









































































































































































error: Content is protected !!
Scroll to Top