Friday, August 19, 2022
spot_img
Homeರಾಜ್ಯಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ : 10 ಮಂದಿ ಸಾವು - ಮೃತರ ಕುಟುಂಬಕ್ಕೆ...

ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ : 10 ಮಂದಿ ಸಾವು – ಮೃತರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರ ಘೋಷಣೆ

ಭೋಪಾಲ್ : ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯಲ್ಲಿ ಐವರು ರೋಗಿಗಳು ಮತ್ತು ಮೂವರು ಆಸ್ಪತ್ರೆ ಸಿಬ್ಬಂದಿ ಸಜೀವವಾಗಿ ಸುಟ್ಟುಹೋಗಿದ್ದಾರೆ. 12 ಮಂದಿಗಿಂತ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಭಾರೀ ಬೆಂಕಿ ಅವಘಡ. ನಮ್ಮ ತಂಡಗಳು ಆಸ್ಪತ್ರೆಯಲ್ಲಿ ಸಿಲುಕಿರುವ ಎಲ್ಲ ಜನರನ್ನು ರಕ್ಷಿಸಿವೆ. ಬೆಂಕಿ ನಂದಿಸಲಾಗಿದೆ ಮತ್ತು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಜಬಲ್ ಪುರದ ಮುಖ್ಯ ಪೊಲೀಸ್ ಅಧೀಕ್ಷಕ ಅಖಿಲೇಶ್ ಗೌರ್ ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!