Friday, August 19, 2022
spot_img
Homeಸುದ್ದಿಶಿವಸೇನೆ ನಾಯಕ ಸಂಜಯ್‌ ರಾವತ್‌ ಬಂಧನ

ಶಿವಸೇನೆ ನಾಯಕ ಸಂಜಯ್‌ ರಾವತ್‌ ಬಂಧನ

1034 ಕೋ.ರೂ. ಮೊತ್ತದ ಪತ್ರಾ ಚಾಳ್‌ ಭೂ ಹಗರಣದ ಆರೋಪ

ಹೊಸದಿಲ್ಲಿ: ಪತ್ರಾ ಚಾಳ್‌ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆಯ ಹಿರಿಯ ನಾಯಕ ಸಂಸದ ಸಂಜಯ್ ರಾವುತ್ ಅವರನ್ನು ಆರು ಗಂಟೆಗಳ ವಿಚಾರಣೆ ಬಳಿಕ ಮಧ್ಯರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ನಿನ್ನೆ ಬೆಳಗ್ಗೆ ಇ.ಡಿ. ಸಂಜಯ್‌ ರಾವತ್‌ ಅವರ ಮನೆ ಮೇಲೆ ದಾಳಿ ಮಾಡಿತ್ತು. ತೀವ್ರ ಪರಿಶೋಧನೆ ಮತ್ತು ವಿಚಾರಣೆ ಬಳಿಕ ಮಧ್ಯರಾತ್ರಿ ಹೊತ್ತಿಗೆ ಅವರನ್ನು ಬಂಧಿಸಲಾಗಿದೆ. ಇದರೊಂದಿಗೆ ಶಿವಸೇನೆಯ ಉದ್ಧವ್‌ ಠಾಕ್ರೆ ಬಣ ತೀವ್ರ ಮುಖಭಂಗ ಅನುಭವಿಸಿದೆ.
ರಾವತ್ ಅವರಿಗೆ ಹೆದರಿ ಬಿಜೆಪಿ ಅವರನ್ನು ಮಧ್ಯರಾತ್ರಿ ಬಂಧಿಸಿದೆ. ಆದರೆ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಮಗೆ ಯಾವುದೇ ದಾಖಲೆಗಳನ್ನು ನೀಡಿಲ್ಲ. ಅವರನ್ನು ಸೋಮವಾರ ಬೆಳಿಗ್ಗೆ 11.30 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ ಎಂದು ರಾವತ್ ಸಹೋದರ ಸುನಿಲ್ ರಾವತ್ ಹೇಳಿದ್ದಾರೆ.
ರಾವತ್ ನಿವಾಸದ ಮೇಲೆ ದಾಳಿ ನಡೆಸಿದ ಗಂಟೆಗಳ ನಂತರ ಇಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. 1,034 ಕೋಟಿ ರೂ.ಗಳ ಪತ್ರಾ ಚಾಳ್‌ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಈ ಹಿಂದೆ ಎರಡು ಬಾರಿ ವಿಚಾರಣೆ ನಡೆಸಲಾಗಿದೆ.
ಬೆಳಗ್ಗೆ 7 ಗಂಟೆಗೆ, ತನಿಖಾ ಸಂಸ್ಥೆ ತಂಡವು ಸಿಐಎಸ್ಎಫ್ ಅಧಿಕಾರಿಗಳೊಂದಿಗೆ ಮುಂಬಯಿಯ ಉಪನಗರ ಭಾಂಡುಪ್‌ನಲ್ಲಿರುವ ಸಂಜಯ್ ರಾವತ್ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿದೆ. ಪತ್ರಾ ಚಾಳ್‌ನ ಮರು ಅಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನ ಹಾಗೂ ಅವರ ಪತ್ನಿ ಮತ್ತು ಸಂಬಂಧಿಕರ ವಹಿವಾಟುಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಸಂಜಯ್ ರಾವತ್ ಅವರು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದು ರಾಜಕೀಯ ದ್ವೇಷದಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.ಸತ್ತರೂ ಶರಣಾಗುವುದಿಲ್ಲ. ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದ ಸಂಜಯ್ ರಾವತ್ ಕೊನೆಗೂ ಇಡಿ ಕುಣಿಕೆ ಬಿಗಿಯಾಗಿದೆ.
ಜುಲೈ 1 ರಂದು ಸಂಜಯ್ ರಾವತ್‌ರನ್ನು ಸುಮಾರು 10 ಗಂಟೆ ವಿಚಾರಣೆ ನಡೆಸಲಾಗಿತ್ತು. ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ, ಜಾರಿ ನಿರ್ದೇಶನಾಲಯವು ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!