Friday, August 19, 2022
spot_img
Homeರಾಜ್ಯವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ

ಬೆಂಗಳೂರು : ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ, ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ. ಈ ಸಂಪ್ರದಾಯಕ್ಕೆ ಮತ್ತಷ್ಟು ಇಂಬು ನೀಡುವ ಹಾಗೂ ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳ ದ್ರವ್ಯ ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!