ಪ್ರಕೃತಿ ನ್ಯಾಷನಲ್ ಸ್ಕೂಲ್ನ ರಿಹಾನ್ ಶೇಕ್, ಸಾಹಿಲ್ ಅವರಿಗೆ ಚಿನ್ನದ ಪದಕ
ಕಾರ್ಕಳ : ಗದಗದ ಲಕ್ಷ್ಮೀಶ್ವರ ಆವರಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯ 14 ರಿಂದ 16 ವರ್ಷದ ಬಾಲಕರ ವಿಭಾಗದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿ ರಿಹಾನ್ ಶೇಕ್ ಪ್ರಥಮ (ಕುಮಿಟೆ) ಮತ್ತು ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. 11ರಿಂದ 12 ವರ್ಷದ ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿ ಸಾಹಿಲ್ ಕುಮಿಟೆಯಲ್ಲಿ ಪ್ರಥಮ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ ಪಡೆದರು. ಇವರಿಗೆ ಮೃಣಾಲಿನಿ ಶೆಟ್ಟಿ ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.