ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ರೂಪಿಸುವ ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಿಸಿದ್ದಾರೆ.
2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ‘ಚುನಾವಣಾ ಪ್ರಣಾಳಿಕೆ, ನೀತಿ(ಪಾಲಿಸಿ) ಮತ್ತು ದೃಷ್ಟಿಕೋನ (ವಿಷನ್) ಸಮಿತಿ’ಯನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ
ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 2023ರ ಮೇ ತಿಂಗಳ ಒಳಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಕಾಂಗ್ರೆಸ್ ಪಕ್ಷ ತಯಾರಲ್ಲಿ ತೊಡಗಿದೆ. ಅದರ ಭಾಗವಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಪರಮೇಶ್ವರ್ ಅಧ್ಯಕ್ಷ
Recent Comments
ಕಗ್ಗದ ಸಂದೇಶ
on