ಕಾರ್ಕಳ : ಕಳೆದ 25 ವರ್ಷಗಳಿಂದ ಕಾರ್ಕಳ ಎಂ.ಪಿ.ಎಂ. ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ವಿಭಾಗ ಮುಖ್ಯಸ್ಥರಾಗಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ಜು. 31ರಂದು ನಿವೃತ್ತಿ ಹೊಂದಿರುವ ಶ್ರಿವರ್ಮ ಅಜ್ರಿ ಅವರಿಗೆ ಹಳೆ ವಿದ್ಯಾರ್ಥಿ ಸಂಘ ಮತ್ತು ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ಮೈಸೂರು ಬಹುದ್ದೂರ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕ ಡಾ. ಮಹೇಶ್ ಆರ್., ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಎಲ್. ಜನ್ನೆ ಶ್ರೀವರ್ಮ ಅಜ್ರಿ ಅವರ ಸರಳತೆ, ಕರ್ತವ್ಯಪರತೆ, ಔದಾರ್ಯ, ಅವರಲ್ಲಿದ್ದ ಮಾನವೀಯ ಮೌಲ್ಯ ಕುರಿತು ಮಾತನಾಡಿದರು.
ಸಾಹಿತಿ ಮುನಿರಾಜ ರೆಂಜಾಳ, ವಿಶ್ರಾಂತ ಪ್ರಾಂಶುಪಾಲ ಗಣಪತಿ ಭಟ್ ಕುಲಮರ್ವ, ಪ್ರೊ. ಬಿ. ಪದ್ಮನಾಭ ಗೌಡ, ಗೋಕರ್ಣನಾಥ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಉಮ್ಮಪ್ಪ ಪೂಜಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿದ್ಯಾಧರ ಹೆಗ್ಡೆ ಶ್ರೀವರ್ಮ ಅಜ್ರಿ ಅವರ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು. ಕಾಲೇಜಿನ ನೂತನ ಪ್ರಾಂಶುಪಾಲ ಡಾ. ಕಿರಣ್ ಎಂ. ಅಧ್ಯಕ್ಷತೆ ವಹಿಸಿದ್ದರು.
ವಿಶ್ರಾಂತ ಪ್ರಾಂಶುಪಾಲ ಡಾ. ಶ್ರೀಧರ ಮಣಿಯಾಣಿ, ಡಾ. ಸುಬ್ರಹ್ಮಣ್ಯ ಭಟ್, ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ. ಶ್ರೀ ಭುವನೇಂದ್ರ ಕಾಲೇಜಿನ ಪ್ರಾಧ್ಯಾಪಕ ಡಾ. ಈಶ್ವರ್ ಭಟ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸುರೇಶ್ ಅತ್ತೂರು, ಪೋಷಕರ ವೇದಿಕೆಯ ಕಾರ್ಯದರ್ಶಿ ಸುರೇಶ್ ಹೆಗ್ಡೆ, ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಉಪನ್ಯಾಸಕರು, ಕಚೇರಿ ಸಿಬ್ಬಂದಿ, ಪೂರ್ವ ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪೂರ್ವ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಉಪನ್ಯಾಸಕ ನವೀನ್ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕಿ ಜ್ಯೋತಿ ಶೆಟ್ಟಿ ಎಸ್. ಗುರುವಂದನ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜಿನ ವಿದ್ಯಾರ್ಥಿ ಅಜಿತ್ ಕಾರ್ಯಕ್ರಮ ನಿರೂಪಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ್ ವಂದಿಸಿದರು.
ಎಂಪಿಎಂ ಕಾಲೇಜಿನ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ನಿವೃತ್ತಿ – ಗುರುವಂದನೆ
Recent Comments
ಕಗ್ಗದ ಸಂದೇಶ
on