Wednesday, August 17, 2022
spot_img
Homeಸುದ್ದಿಹಾನಿಗೊಳಗಾಗಿರುವ ಮನೆಗಳಿಗೆ ತಕ್ಷಣ ಪರಿಹಾರ: ಡಿಸಿಗಳಿಗೆ ಸಿಎಂ ಸೂಚನೆ

ಹಾನಿಗೊಳಗಾಗಿರುವ ಮನೆಗಳಿಗೆ ತಕ್ಷಣ ಪರಿಹಾರ: ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ತೀವ್ರ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ತಕ್ಷಣ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳೀಗೆ ಸೂಚಿಸಿದ್ದಾರೆ. ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ವೀಡಿಯೊ ಮಳೇ ಹಾನಿ ಅವಲೋಕಿಸುವ ಸಲುವಾಗಿ ಸಂವಾದ ನಡೆಸಿದ ಬೊಮ್ಮಾಯಿ ಮನೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು.
ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳಿಂದ ಸಿಎಂ ಬೊಮ್ಮಾಯಿ ಮಾಹಿತಿ ಪಡೆದು ಹಾನಿಯಾಗಿರುವ ಮನೆಗಳ ಬಗ್ಗೆ ಪ್ರಾಥಮಿಕ ವರದಿಯನ್ನು ತಾಲೂಕಿನ ಇಓಗಳಿಂದ ಪಡೆಯುದು ಪರಿಹಾರ ನೀಡಲು ಹೇಳಿದರು.
2430 ಮನೆ ಕುಸಿತ
ಮಳೆಗಾಲ ಶುರುವಾದ ಬಳಿಕ ಒಟ್ಟು 3499 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ದು, 2057 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶವಾಗಿದೆ. 2430 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 4378 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇದುವರೆಗೆ ಭಾರಿ ಮಳೆಗೆ 39 ಮಂದಿ ಸಾವನ್ನಪ್ಪಿದ್ದು, 99 ಪ್ರಾಣಿಗಳ ಜೀವಕ್ಕೂ ಹಾನಿಯಾಗಿದೆ. 1730 ಕಿ.ಮೀ ರಸ್ತೆ ಹಾನಿಯಾಗಿದ್ದು, 5419 ಕಿ.ಮೀ. ಗ್ರಾಮೀಣ ರಸ್ತೆ ಹಾನಿಯಾಗಿವೆ. 629 ಸೇತುವೆಗಳು ಹಾನಿಯಾಗಿವೆ. 3264 ಶಾಲಾ ಕಟ್ಟಡಗಳು ಹಾನಿಯಾಗಿದ್ದು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳಿಗೆ ಹಾನಿಯಾಗಿದೆ. 11796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಹಾಗೂ 759 ಟ್ರಾನ್ಸ್ ಫಾರ್ಮರ್ಗಳು ಹಾನಿಗೊಳಪಟ್ಟಿವೆ.
ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚನೆ ನೀಡಿರುವ ಸಿಎಂ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು ಪುನ:ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಹೇಳಿದ್ದಾರೆ.
ಬಿದ್ದುಹೋದ ಮನೆಗಳ ತುರ್ತಾಗಿ ಜಂಟಿ ಸಮೀಕ್ಷೆ ಕೈಗೊಳ್ಳುವುದು. ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವುದು, ಭಟ್ಕಳ, ಸುಳ್ಯ ಸೇರಿದಂತೆ ಇತರ ಕಡೆಗಳ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸುವುದು ಇತ್ಯಾದಿ ಸಲಹೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ.
ಉಡುಪಿ ಸೇರಿ ಕೆಲವು ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು.ಹಾನಿಗೊಳಗಾಗಿರುವ ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!