Friday, August 19, 2022
spot_img
Homeಉದ್ಯೋಗ ಮಾಹಿತಿ-ಅರ್ಜಿಬ್ಯಾಂಕುಗಳ 6432 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕುಗಳ 6432 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಆರಂಭ ದಿನಾಂಕ: ಆಗಸ್ಟ್ 02, 2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 22, 2022

ಹೊಸದಿಲ್ಲಿ: ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 6432 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರೊಬೆಷನರಿ ಆಫೀಸರ್(PO) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 22ರ ತನಕ ಅರ್ಜಿ ಸಲ್ಲಿಸಬಹುದು.
ದೇಶಾದ್ಯಾಂತ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಗಾಗಿ ಮುಂದಿನ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗಾಗಿ ಆನ್‌ಲೈನ್ ಪರೀಕ್ಷೆ (ಪೂರ್ವಭಾವಿ ಮತ್ತು ಮುಖ್ಯ) ಅಕ್ಟೋಬರ್ 2022 ಮತ್ತು ನವೆಂಬರ್ 2022 ರಲ್ಲಿ ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ ಎಂದು ಐಬಿಪಿಎಸ್‌ ಪ್ರಕಟಣೆ ತಿಳಿಸಿದೆ.
ನೇಮಕಾತಿ ವಿವರ
ಬ್ಯಾಂಕ್ ಹೆಸರು- ಒಟ್ಟು ಹುದ್ದೆ
ಬ್ಯಾಂಕ್ ಆಫ್ ಬರೋಡಾ 535
ಕೆನರಾ ಬ್ಯಾಂಕ್ 2500
ಪಂಜಾಬ್ ನ್ಯಾಷನಲ್ ಬ್ಯಾಂಕ್ 500
ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ 253
ಯುಕೋಬ್ಯಾಂಕ್ 550
ಯೂನಿಯನ್ ಆಫ್ ಇಂಡಿಯಾ 2094
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ: 20 ರಿಂದ 30ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು 155 ರೂ. (ಜಿಎಸ್ಟಿ ಸೇರಿಸಿ) ಶುಲ್ಕವನ್ನು ಪಾವತಿ ಮಾಡಬೇಕು. ಉಳಿದ ಅಭ್ಯರ್ಥಿಗಳು 850 ರೂ. ಶುಲ್ಕ ಪಾವತಿಸಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ನಿಗದಿತ ವೆಬ್‌ಸೈಟ್‌ನಲ್ಲಿ ಸರಿಯಾದ ಇ-ಮೇಲ್ ಐಡಿ, ಮೊಬೈಲ್ ನಂಬರ್ ನಮೂದು ಮಾಡಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ ಸರಿಯಾಗಿದೆಯೆ ಪರಿಶೀಲಿಸಬೇಕು.
ಮೊದಲನೆಯದಾಗಿ IBPS ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಿ.
ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
IBPS ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
IBPS ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ. ಸೇವ್ ಮಾಡಿಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ ibps.in ವೆಬ್‌ ಸೈಟ್‌ಗೆ ಭೇಟಿ ನೀಡಿ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!