Homeಜಿಲ್ಲಾಉಳ್ಳಾಲದಲ್ಲಿ ಯುವಕನ ಮೇಲೆ ತಲವಾರು ದಾಳಿ ಯತ್ನ ನಡೆದಿದೆ ಎನ್ನುವುದು ಸುಳ್ಳು : ಮಂಗಳೂರು ಪೊಲೀಸ್...

Related Posts

ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರು ದಾಳಿ ಯತ್ನ ನಡೆದಿದೆ ಎನ್ನುವುದು ಸುಳ್ಳು : ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ

ಮಂಗಳೂರು : ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ಹೇಳಿದ್ದಾರೆ.
ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್‌ ಸಾಲ್ಯಾನ್‌ ಎಂಬಾತ ಇಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತನ್ನ ಮೇಲೆ ಆಗಂತುಕರ ತಂಡವೊಂದು ಮಾರಾಕಾಸ್ತ್ರ ಹಿಡಿದು ಅಟ್ಟಾಡಿಸಿದ್ದಾರೆ ಎಂದು ಮನೆಗೆ ಬಂದು ಹೇಳಿದ್ದಾನೆ.
ಕ್ಷಣಾರ್ಧದಲ್ಲಿ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಈ ಬಗ್ಗೆ ಆತನನ್ನು ನಾನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದು,
ಆತನೇ ಮನೆಗೆ ಬಂದು ಸುಳ್ಳು ಸುದ್ದಿ ಸೃಷ್ಟಿಸಿದ್ದಾನೆ. ಆತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Latest Posts

error: Content is protected !!