Homeಸುದ್ದಿಬಿಜೆಪಿ ಚಾಣಕ್ಯ ರಾಜ್ಯಕ್ಕಾಗಮನ; ಬಿಎಸ್‌ವೈ ಭೇಟಿ

Related Posts

ಬಿಜೆಪಿ ಚಾಣಕ್ಯ ರಾಜ್ಯಕ್ಕಾಗಮನ; ಬಿಎಸ್‌ವೈ ಭೇಟಿ


ರಾಜಕೀಯ ವಲಯದಲ್ಲಿ ಗರಿಗೆದರಿದ ಕುತೂಹಲ
ಬೆಂಗಳೂರು:ಕಾಂಗ್ರೆಸ್‌ ನಿನ್ನೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನೆಪದಲ್ಲಿ ಬೃಹತ್‌ ಸಮಾವೇಶ ನಡೆಸಿದೆ ಬೆನ್ನಿಗೆ ಬಿಜೆಪಿಯ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿನ್ನೆ ರಾತ್ರಿ ರಾಜ್ಯಕ್ಕೆ ಬಂದಿಳಿದಿದ್ದಾರೆ. ಚುನಾವಣೆಗೆ ಅಣಿಯಾಗುತ್ತಿರುವ ರಾಜ್ಯದಲ್ಲಿ ಶಾ ಭೇಟಿ ಸಹಜವಾಗಿಯೇ ಕುತೂಹಲ ಕೆರಳಿಸಿದೆ.
ಬೆಂಗಳೂರಿಗೆ ಕಳೆದ ರಾತ್ರಿ ಬಂದಿಳಿದ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ನಾಯಕರು ಬರಮಾಡಿಕೊಂಡಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ತೀವ್ರ ಆಕ್ರೋಶಿತಗೊಂಡಿರುವ ಬಿಜೆಪಿ ಕಾರ್ಯಕರ್ತರು ಹಲವು ಜಿಲ್ಲೆಗಳಲ್ಲಿ ತಮ್ಮ ಸ್ಥಾನಗಳಿಗೆ ಸರಣಿ ರಾಜೀನಾಮೆ ಕೊಟ್ಟಿದ್ದರು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷಕ್ಕೆ ಇದು ದೊಡ್ಡ ಹೊಡೆತವಾಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಅಮಿತ್ ಶಾ ರಾಜ್ಯಕ್ಕೆ ಬಂದಿರುವುದು ಕುತೂಹಲ ಕೆರಳಿಸಿದೆ.

ಯಡಿಯೂರಪ್ಪ ಭೇಟಿ
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಅಮಿತ್​​ ಶಾ ಅವರು ಉಳಿದುಕೊಂಡಿರುವ ತಾಜ್ ವೆಸ್ಟ್ ಎಂಡ್ ಹೊಟೇಲ್‌ಗೆ ಹೋಗಿ ಭೇಟಿ ನೀಡಿ ಇಬ್ಬರೂ ಒಟ್ಟಿಗೆ ಉಪಾಹಾರ ಸೇವಿಸಿದ್ದಾರೆ.
ಅಮಿತ್​ ಶಾ ಜತೆ ರಾಜ್ಯ ರಾಜಕಾರಣ ಕುರಿತು ಬಿಎಸ್​ವೈ ಚರ್ಚೆ ನಡೆಸಿದ್ದಾರೆ. ಶಿಕಾರಿಪುರ ಕ್ಷೇತ್ರಕ್ಕೆ ಸಂಬಂಧ ತಾವು ಕೈಗೊಂಡಿರುವ ತೀರ್ಮಾನ, ವಿಜಯೇಂದ್ರ ಸ್ಪರ್ಧೆ, ಸಿದ್ದರಾಮಯ್ಯ ಅಮೃತ ಮಹೋತ್ಸವ ಕುರಿತು ಚರ್ಚೆ ನಡೆಸಿದ್ದು, ವಿಧಾನಸಭೆ ಚುನಾವಣೆಗೆ ಮುನ್ನ ಸರ್ಕಾರದ ವರ್ಚಸ್ಸು ಹೆಚ್ಚಳ, ಪಕ್ಷ ಸಂಘಟನೆ, ಚುನಾವಣೆಗೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಕಾರ್ಯಕರ್ತರು ನುಗ್ಗಿದ್ದರು. ಅಂತಹ ಲೋಪ ಆಗದಂತೆ ಬೆಂಗಳೂರು ಪೊಲೀಸರು ಎಚ್ಚರಿಕೆ ವಹಿಸಿದ್ಧಾರೆ. ಅಮಿತ್​ ಶಾಗೆ ಝಡ್​ ಪ್ಲಸ್ ಭದ್ರತೆ ಇದ್ದರೂ ಹೆಚ್ಚಿನ ಬಂದೋಬಸ್ತ್​​ ಮಾಡಲಾಗಿದೆ.
ತಾಜ್ ವೆಸ್ಟ್ಎಂಡ್​ ಸುತ್ತಮುತ್ತ ಭಾರೀ ಪೊಲೀಸ್​ ಭದ್ರತೆ ಮಾಡಲಾಗಿದೆ. 2, 500ಕ್ಕೂ ಹೆಚ್ಚು ಪೊಲೀಸರು ಅಮಿತ್​ ಶಾ ಬಂದೋಬಸ್ತ್​ಗೆ ನಿಯೋಜನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!