ಬೆಂಗಳೂರು : ರಸ್ತೆಗಳ ಅತಿಕ್ರಮಣ, ಅಪಘಾತ ಪ್ರಮಾಣ ತಗ್ಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡ ನಿರ್ಮಾಣ ತಡೆಗಟ್ಟುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯ ಹೆದ್ದಾರಿ ಮಧ್ಯಭಾಗದಿಂದ 40 ಮೀ. ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿ ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀ. ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ ಸಿಟಿ ಕಾರ್ಪೋರೇಶನ್ ಪರಿಮಿತಿಯಿಂದ 12 ಮೀಟರ್ ಪಾಲಿಸುವುದು ಕಡ್ಡಾಯವಾಗಿದೆ ಎಂದವರು ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on