Friday, August 19, 2022
spot_img
Homeರಾಜ್ಯಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 3 ದಿನ ತೀವ್ರ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 3 ದಿನ ತೀವ್ರ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ತಿರುವನಂತಪುರ : ಮುಂದಿನ 3 ದಿನಗಳಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ತೀವ್ರ ಮಳೆಯಾಗಲಿದ್ದು, ಆದರೆ ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಆ. 6 ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಾಸರಗೋಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುತ್ತಿರುವುದೇ ಮಳೆ ಹೆಚ್ಚಾಗಲು ಕಾರಣ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕೇರಳದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದಾಗಿ ಪೆರಿಂಗಲ್ಕುತ್ತು ಅಣೆಕಟ್ಟಿನ ನಾಲ್ಕನೇ ಷಟರ್ ಅನ್ನು ತೆರೆಯಲಾಗಿದೆ. ಇದರ ಪರಿಣಾಮವಾಗಿ ಚಾಲಕುಡಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅಧಿಕಾರಿಗಳು ನದಿ ತೀರದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ಕೊಟ್ಟಾಯಂ ಜಿಲ್ಲೆಯಲ್ಲಿ ರಸ್ತೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ. ಸಮುದ್ರದ ಅಲೆಗಳು 3.3 ಮೀಟರ್ ಎತ್ತರಕ್ಕೇರುವ ಸಾಧ್ಯತೆಯಿರುವುದರಿಂದ ನದಿ ತೀರಗಳಲ್ಲಿ ರಾತ್ರಿ ಪ್ರಯಾಣ ಮಾಡದಂತೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!