ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅಶ್ನಿ ಕೋಟ್ಯಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಸಾಣೂರು ಅಶೋಕ್ ಕೋಟ್ಯಾನ್ ಹಾಗೂ ಸೌಮ್ಯಾ ದಂಪತಿ ಪುತ್ರಿ.