ಕಾರ್ಕಳ : ಸಾಣೂರು ಯುವಕ ಮಂಡಲ ಹಾಗೂ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಆ. 7ರಂದು ಸಾಣೂರಿನಲ್ಲಿ ತಾಲೂಕಿನ 75 ಯುವಕ ಸಂಘಗಳ ಜೊತೆ ಯುವ ಮಂಡಲ ಅಭಿವೃದ್ಧಿ ಅಭಿಯಾನ ಕಾರ್ಯಕ್ರಮ ನಡಯಲಿದೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಯುವಕ ಮಂಡಲ ಸಾಣೂರು ಇದರ ಪಠೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ಕಾರ್ಕಳ ತಾಲೂಕಿನ 75 ಸಂಘ ಸಂಸ್ಥೆಗಳ ಸದಸ್ಯರ ಉಪಸ್ಥಿತಿಯಲ್ಲಿ ಯುವ ಮಂಡಲ ಅಭಿವೃದ್ಧಿ ಅಭಿಯಾನ, ಆಯ್ದ ಯುವಕ ಸಂಘಗಳಿಗೆ ಕ್ರೀಡಾ ಸಲಕರಣೆ ವಿತರಣಾ ಕಾರ್ಯಕ್ರಮ ಅಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on