Friday, August 19, 2022
spot_img
Homeಜಿಲ್ಲಾದ. ಕ. : ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ

ದ. ಕ. : ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿ ಚಕ್ರ ವಾಹನ ಸವಾರರಿಗೆ ಹೊಸ ನಿಯಮ ಪೊಲೀಸ್ ಇಲಾಖೆ ಜಾರಿಗೆ ತರಲಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿರಿಗೆ ಅವಕಾಶವಿಲ್ಲ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ವಿಚಾರಕ್ಕೆ ಸಂಬಂಧಿಸಿ ಸಂಜೆ 6 ರಿಂದ ಮುಂಜಾನೆ 6 ವರೆಗೆ ಹೇರಲಾಗಿದ್ದ ನಿಷೇಧಾಜ್ಞೆ ಸಡಿಲಿಕೆಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಹಂತ ಹಂತವಾಗಿ ನಿಷೇಧಾಜ್ಞೆ ಸಡಿಲಗೊಳಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ.
ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಎಡಿಜಿಪಿ ಸೂಚನೆ ನೀಡಿದ್ದಾರೆ. ಆ. ೫ ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಸಡಿಲಿಕೆ ಬಳಿಕ ಒಂದು ವಾರ ಕಾಲ ಬೈಕ್ ನಲ್ಲಿ ಯುವಕರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ. ಈ ವೇಳೆ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಬೈಕ್ ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಯುವಕರು ಹಿಂಬದಿ ಸವಾರಿ ಮಾಡದಂತೆ ಸೂಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಆದೇಶ ಹೊಡಿಸುವ ಕುರಿತು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!