ಮುಂಬಯಿ: ಮುಂಬಯಿ ಹೊರವಲಯದ ನಲ್ಲಸೋಪಾರ ಬಳಿ ಕಾರ್ಯಾಚರಿಸುತ್ತಿದ್ದ ಮಾದಕ ವಸ್ತು ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ ಪೊಲೀಸರು, ಐವರನ್ನು ಬಂಧಿಸಿ ಬರೋಬ್ಬರಿ 1,400 ಕೋಟಿ ರೂ. ಮೌಲ್ಯದ 7ಕ್ವಿಂಟಾಲ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಮುಂಬಯಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಮುಂಬಯಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಡ್ರಗ್ ಪೆಡ್ಲರ್‌ಗಳಿಗೆ ಪೂರೈಕೆ ಮಾಡಲು ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಮಾದಕ ವಸ್ತುವನ್ನು ಇದಾಗಿತ್ತು.
ಆರ್ಗ್ಯಾನಿಕ್ ಕೆಮಿಸ್ಟ್ರಿ ಸ್ನಾತಕೋತ್ತರ ಪದವೀಧರನೇ ಪ್ರಮುಖ ಆರೋಪಿ. ಬಂಧಿತ ಇತರ ನಾಲ್ವರು ಆರೋಪಿಗಳ ಪೈಕಿ ಒಬ್ಬಳು ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆಯಲ್ಲಿ ಮಾದಕ ವಸ್ತು ಅಕ್ರಮ ಮಾರಾಟದಲ್ಲಿ ಮತ್ತಷ್ಟು ಮಂದಿ ತೊಡಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ ಎಂದು ಮಾದಕ ದ್ರವ್ಯ ನಿಗ್ರಹ ವಿಭಾಗದ ಡಿಸಿಪಿ ದತ್ತಾ ನಲವಡೆ ತಿಳಿಸಿದ್ದಾರೆ.

































