Homeಸುದ್ದಿಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

Related Posts

ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

ಆರು ತಿಂಗಳ ಮಗು ಕೂಡ ಬಲಿ

ಯಾದಗಿರಿ: ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ (ಕೆ) ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ರಾತ್ರಿ 10.30ರ ಸುಮಾರಿಗೆ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಐವರು ಹಾಗೂ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಮಹ್ಮದ್ ವಾಜೀದ್ ಹುಸೇನ್ (39), ಮಹಮ್ಮದ್ ಮಜರ್ ಹುಸೇನ್ (79), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ (30), ಇಮ್ರಾನ್ (22), ಉಮೇಜಾ(6 ತಿಂಗಳ ಮಗು) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಬಾಲಕ ಮಹ್ಮದ್ ಪಾಜೀಲ್ ಹುಸೇನ್‌ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಹೀನಾ ಮತ್ತು ಇಮ್ರಾನ್ ಯಾದಗಿರಿಯ ಚಕ್ರಕಟ್ಟೆಯ ರಂಗನಮೊಹಲ್ಲಾದ ನಿವಾಸಿಗಳಾಗಿದ್ದು, ಉಳಿದ 5 ಜನರು ಲಿಂಗಸುಗೂರು ತಾಲೂಕಿನ(ರಾಯಚೂರು ಜಿಲ್ಲೆ) ಹಟ್ಟಿ ಗ್ರಾಮದ ನಿವಾಸಿಗಳು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಅವರು ತಿಳಿಸಿದ್ದಾರೆ.
ಈ ಎಲ್ಲಾ 7 ಜನ ತೆಲಂಗಾಣದ ಕೊಡಂಗಲ್ ಗ್ರಾಮದಲ್ಲಿ ಜವಳ‌ ಕಾರ್ಯಕ್ರಮ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದರು. ಅವರ ಹುಂಡೈ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಹಾಗೂ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ .

LEAVE A REPLY

Please enter your comment!
Please enter your name here

Latest Posts

error: Content is protected !!