Friday, August 19, 2022
spot_img
Homeರಾಜ್ಯಪುನೀತ್‌ ರಾಜ್‌ಕುಮಾರ್‌ ಗೆ ಮರಣೋತ್ತರ "ಕರ್ನಾಟಕ ರತ್ನ"

ಪುನೀತ್‌ ರಾಜ್‌ಕುಮಾರ್‌ ಗೆ ಮರಣೋತ್ತರ “ಕರ್ನಾಟಕ ರತ್ನ”

ಬೆಂಗಳೂರು : ಉದ್ಯಾನ ನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳ ಕಾಲ ರದ್ದಾಗಿದ್ದ ಫಲಪುಷ್ಪ ಪ್ರದರ್ಶನ ಈ ವರ್ಷ ಮತ್ತೆ ಆರಂಭವಾಗಿದೆ. ಇಂದು ಲಾಲ್ ಬಾಗ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಈ ಬಾರಿ ಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಗೌರವವನ್ನು ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ನೀಡಲಾಗುವುದು ಎಂದು ಪ್ರಕಟಿಸಿದರು.
ಪುಷ್ಪ ಪ್ರದರ್ಶನ
ಇಂದಿನಿಂದ ಆಗಸ್ಟ್ 15ವರೆಗೆ ಪುಷ್ಪ ಪ್ರದರ್ಶನ ನಡೆಯಲಿದ್ದು, ಪುನೀತ್ ರಾಜ್ ಕುಮಾರ್ ಪರಿಕಲ್ಪನೆಯಲ್ಲಿ ವಿನ್ಯಾಸ ಮಾಡಲಾಗಿದ್ದು, 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಟಿಕೆಟ್ ದರ 70 ರೂಪಾಯಿಗಳಿದ್ದರೆ, ವಾರಂತ್ಯದಲ್ಲಿ 75 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಹೇಳಿದ್ದಾರೆ. ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳಿಗೆ ಈ ಪ್ರದರ್ಶನ ಉಚಿತವಾಗಿರಲಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!