Friday, August 19, 2022
spot_img
Homeರಾಜ್ಯಮುಂದಿನ ವರ್ಷ ಯುವ ಬಜೆಟ್‌ ಮಂಡನೆ - ಸಿಎಂ ಬೊಮ್ಮಾಯಿ

ಮುಂದಿನ ವರ್ಷ ಯುವ ಬಜೆಟ್‌ ಮಂಡನೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಬಾಲಸುಬ್ರಮಣ್ಯಂ ನೇತೃತ್ವದ ತಜ್ಞರ ಸಮಿತಿ ಕರಡು ಕರ್ನಾಟಕ ಯುವ ನೀತಿ – 2022 (ಕೆವೈಪಿ)ಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕರಡು ಸ್ವೀಕರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟದ ಅನುಮೋದನೆಯ ನಂತರ ಈ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ದೇಶದ ಜನಸಂಖ್ಯೆಯಲ್ಲಿ ಶೇ. 46 ರಷ್ಟು ಯುವಕರಿದ್ದಾರೆ. ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್​ ರೂಪಿಸಲಾಗುವುದು ಎಂದು ಸಿಎಂ ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!