Homeರಾಜ್ಯಸಿಎಂ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

Related Posts

ಸಿಎಂ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದು, ನನಗೆ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೊರೋನಾ ದೃಢಪಟ್ಟ ತಕ್ಷಣ ಪ್ರತ್ಯೇಕವಾಗಿದ್ದು ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಗೆ ತೆರಳಬೇಕಾಗಿತ್ತು. ಆದರೆ ಕೊರೋನಾ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!