Friday, August 19, 2022
spot_img
Homeಸುದ್ದಿಇಂದು ಉಪ ರಾಷ್ಟ್ರಪತಿ ಚುನಾವಣೆ

ಇಂದು ಉಪ ರಾಷ್ಟ್ರಪತಿ ಚುನಾವಣೆ


ಸಂಜೆಯೇ ಫಲಿತಾಂಶ ಪ್ರಕಟ; ಧನಕರ್‌ ಗೆಲುವು ಬಹುತೇಕ ಖಚಿತ

ಹೊಸದಿಲ್ಲಿ: ಉಪ ರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆಯಿಂದ ಮತದಾನ ನಡೆಯಲಿದ್ದು, ಸಂಸತ್ತಿನ ಉಭಯ ಸದನಗಳ ಸದಸ್ಯರು ನೂತನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಮತ ಚಲಾಯಿಸಲಿದ್ದಾರೆ.
ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಕಣಕ್ಕಿಳಿದಿದ್ದು, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಕರ್ನಾಟಕದ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಕಣಕ್ಕಿಳಿಸಿವೆ. ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದವರು. ಅವರು 2019ರ ಜುಲೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದರು. ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾದ ನಂತರ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು.
ಮಾರ್ಗರೆಟ್ ಆಳ್ವಾ ಜುಲೈ 19ರಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಜುಲೈ 17ರಂದು ವಿರೋಧ ಪಕ್ಷಗಳು ರಾಜಸ್ಥಾನದ ಮಾಜಿ ರಾಜ್ಯಪಾಲರನ್ನು ಉಪರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದವು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ 17 ಪಕ್ಷಗಳ ವಿರೋಧ ಪಕ್ಷದ ನಾಯಕರ ಸಭೆಯಲ್ಲಿ ಮಾರ್ಗರೆಟ್ ಆಳ್ವಾ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮಾರ್ಗರೇಟ್ ಆಳ್ವಾ ಅವರನ್ನು ಬೆಂಬಲಿಸಲಿವೆ. ಮತ್ತೊಂದೆಡೆ, ಜಗದೀಪ್ ಧನಕರ್ ಅವರಿಗೆ ಜೆಡಿಯು, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಶಿವಸೇನೆಯಂತಹ ಪಕ್ಷಗಳ ಬೆಂಬಲವಿದೆ.
ಜಗದೀಪ್ ಧನಕರ್ ಅವರಿಗೆ ಸುಲಭ ಗೆಲುವು ಖಚಿತ ಎನ್ನಲಾಗಿದೆ. 80 ವರ್ಷದ ಮಾರ್ಗರೆಟ್ ಆಳ್ವಾ ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದು, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. 71 ವರ್ಷದ ಜಗದೀಪ್ ಧನಕರ್ ಅವರು ಸಮಾಜವಾದಿ ಹಿನ್ನೆಲೆ ಹೊಂದಿರುವ ರಾಜಸ್ಥಾನದ ಜಾಟ್ ಸಮುದಾಯದ ನಾಯಕರಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!