Sunday, October 2, 2022
spot_img
Homeಸುದ್ದಿಸಂಕದಿಂದ ತೋಡಿಗೆ ಬಿದ್ದು ಬಾಲಕಿ ನೀರುಪಾಲು: ಮುಂದುವರಿದ ಶೋಧ

ಸಂಕದಿಂದ ತೋಡಿಗೆ ಬಿದ್ದು ಬಾಲಕಿ ನೀರುಪಾಲು: ಮುಂದುವರಿದ ಶೋಧ

ಉಡುಪಿ: ಬೈಂದೂರು ತಾಲೂಕಿನಲ್ಲಿ ಶಾಲೆ ಮುಗಿಸಿ ಸೋಮವಾರ ಸಂಜೆ ಮನೆಗೆ ಮರುಳುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ತೋಡಿನ ಸಣ್ಣ ಕಾಲುಸಂಕ ದಾಟುವಾಗ ಜಾರಿಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ. ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಆಕೆಯ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಸ್ಥಳೀಯರು ತೀವ್ರ ಶೋಧ ನಡೆಸುತ್ತಿದ್ದರೂ ಪತ್ತೆಯಾಗಿಲ್ಲ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಈಕೆ.

ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಸನ್ನಿಧಿ ಸೋಮವಾರ ಮನೆಗೆ ಆಯಾ ಜೊತೆ ಹಿಂತಿರುಗುವಾಗ ಬೀಜಮಕ್ಕಿ ಎಂಬಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕಾಲ್ತೋಡು ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!