ಕಾರ್ಕಳ : ಸಂಘಟನೆ ಬಲಿಷ್ಠವಾಗಲು ಸದಸ್ಯರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಕಾರ್ಕಳ ವಲಯ ಫೋಟೋಗ್ರಾಫರ್ ಅಸೋಸಿಯೇಷನ್ ಮಾದರಿಯಾಗಿ ಗುರುತಿಸಿಕೊಂಡಿದೆ. ಸಂಘಟನೆ ಮೂಲಕ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವ ಇಲ್ಲಿನ ತಂಡದ ಕಾರ್ಯ ನಿರಂತರವಾಗಿ ಮುಂದುವರಿಯುತ್ತಿರಲಿ ಎಂದು ಎಸ್‌ಕೆಪಿಎ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ ಆಶಯ ವ್ಯಕ್ತಪಡಿಸಿದರು.
ಅವರು ಶನಿವಾರ ಹೊಟೇಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕಾರ್ಕಳ ವಲಯದ 27ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಸಂಘದ ಸದಸ್ಯರಾಗಿರುವ ಕೆ.ಎಂ. ಖಲೀಲ್, ಹರಿ ಪ್ರಸಾದ್ ನಂದಳಿಕೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ವಲಯದ ಸದಸ್ಯರ ಮಕ್ಕಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಕಳ ವಲಯದ ಅಧ್ಯಕ್ಷ ಈಶ್ವರ ಕುಂಟಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಉಪಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಸುಬ್ರಮಣ್ಯ, ನಿಕಟ ಪೂರ್ವ ಅಧ್ಯಕ್ಷ ಭಾಸ್ಕರ್ ಕುಲಾಲ್, ಕಾರ್ಯದರ್ಶಿ ಟಿ.ವಿ. ಸುಶೀಲ್ ಕುಮಾರ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಮಹೇಂದ್ರ ಶೆಟ್ಟಿ ಸ್ವಾಗತಿಸಿ, ರೊನಾಲ್ಡ್ ಕ್ಯಾಸ್ತಲೀನೋ ನಿರೂಪಿಸಿದರು. ವಿಶ್ವಾಸ್ ಡೊಂಗ್ರೆ ವಂದಿಸಿದರು.






































































