ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಕಡಬ: ಕುಟುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.









































































































































































error: Content is protected !!
Scroll to Top