ದಲಿತ ಬಾಲಕನ ಹತ್ಯೆ ಖಂಡಿಸಿ ಕಾಂಗ್ರೆಸ್‌ ಶಾಸಕ ರಾಜೀನಾಮೆ

ನೀರಿನ ಮಡಕೆ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಬಾಲಕನ ಕೊಲೆ

ಜೈಪುರ: ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಕಾಂಗ್ರೆಸ್ ಶಾಸಕ ಪಾನ್‌ಚಂದ್ ಮೇಘವಾಲ್ ರಾಜೀನಾಮೆ ನೀಡಿದ್ದಾರೆ. ಸಿಎಂ ಅಶೋಕ್ ಗೆಹ್ಲೋಟ್‌ಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ತನ್ನ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದೆ ಇದ್ದಲ್ಲಿ ಶಾಸಕನಾಗಿ ಮುಂದುವರಿಯುವ ಹಕ್ಕು ಇಲ್ಲ ಎಂದು ಪಾನ್‌ಚಂದ್ ಮೇಘವಾಲ್ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ನೀರಿನ ಮಡಕೆ ಮುಟ್ಟಿದ್ದಕ್ಕೆ ಶಿಕ್ಷಕನಿಂದ ದಲಿತ ಬಾಲಕ ಕೊಲೆ
ಪಾನ್‌ಚಂದ್‌ ಕ್ಷೇತ್ರದಲ್ಲೇ 9 ವರ್ಷದ ದಲಿತ ಬಾಲಕ ಕುಡಿಯುವ ನೀರಿನ ಮಡಕೆ ಮುಟ್ಟಿದ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರೊಬ್ಬರು ಆತನನ್ನು ಹೊಡೆದಿದ್ದರು, ಪರಿಣಾಮವಾಗಿ ಬಾಲಕ ಮೃತಪಟ್ಟಿದ್ದ. ಈ ಘಟನೆ ದೇಶಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿದೆ. ದಲಿತರ ಸಂರಕ್ಷಕ ಎಂದು ಸೋಗು ಹಾಕುತ್ತಿರುವ ಕಾಂಗ್ರೆಸ್‌ ಆಡಳಿತವಿರುವ ರಾಜ್ಯದಲ್ಲೇ ಘಟನೆ ಸಂಭವಿಸಿದ ಎರಡು ದಿನಗಳ ಬಳಿಕ ಶಾಸಕ ಪಾನ್‌ಚಂದ್ ಮೇಘವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಯಾವುದೇ ಹುದ್ದೆ ಇಲ್ಲದೆಯೂ ನಾವು ಜನರ ಸೇವೆ ಮಾಡಬಹುದು ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.ಬಾಲಕನ ಕುಟುಂಬಕ್ಕೆ 50 ಲ.ರೂ. ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡುವಂತೆ ಅವರು ಒತ್ತಾಯಿಸಿದ್ದರು. ಆದರೆ ಸರಕರದಿಂದ ಈ ಬೇಡಿಕೆಗೆ ಯಾವುದೇ ಪ್ರತಿಸ್ಪಂದನೆ ವ್ಯಕ್ತವಾಗದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.





























































































































































































































error: Content is protected !!
Scroll to Top