ನಸುಕಿನ ಜಾವ ಭೀಕರ ಅಪಘಾತ: 9 ಕಾರ್ಮಿಕರು ಸಾವು

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಹತ್ತಿರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಕಾರ್ಮಿಕರು ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಶಿರಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದವರೆಲ್ಲಾ ರಾಯಚೂರು ಜಿಲ್ಲೆಯ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ. ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ.
ನಸುಕಿನ ಜಾವ ರಾಯಚೂರು ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ಬಡ ಕೂಲಿ ಕಾರ್ಮಿಕರನ್ನು ಹೊತ್ತ ಕ್ರೂಸರ್ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ಶಿರಾ ಬಳಿ ಬರುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ಡಿಕ್ಕಿಯಾಗಿ ಸ್ಥಳದಲ್ಲಿಯೇ 9 ಜನ ಕಾರ್ಮಿಕರು ಮೃತಪಟ್ಟಿದ್ದಾರೆ.
ನಸುಕಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಕ್ರೂಸರ್​ನಲ್ಲಿ 20 ಜನರಿದ್ದು, ಎಲ್ಲರೂ ರಾಯಚೂರು ಜಿಲ್ಲೆಯರು ಎನ್ನಲಾಗುತ್ತಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿದ್ದಾರೆ. 11 ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.











































error: Content is protected !!
Scroll to Top