ಕಟೀಲ್‌ ಬದಲಾವಣೆಗೆ ನಡೆಯುತ್ತಿದೆ ಆನ್‌ಲೈನ್‌ ಅಭಿಯಾನ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೆ ವ್ಯಕ್ತಿಯನ್ನು ನೇಮಿಸಬೇಕೆಂದು ಆಗ್ರಹಿಸಿ ಆನ್‌ಲೈನ್‌ ಅಭಿಯಾನವೊಂದು ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಆಗಮಿಲಿದ್ದು, ಇದೇ ಸಂದರ್ಭದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಇನ್ನೊಂದು ಅವಧಿಗೆ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ “ಹಿಂದುತ್ವ” ಕಾರ್ಯಕರ್ತರು ಅಭಿಯಾನ ನಡೆಸುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅಧಿಕಾರವಧಿ ಇದೇ ತಿಂಗಳಲ್ಲಿ ಕೊನೆಗೊಳ್ಳಲಿದೆ, ಹೀಗಾಗಿ ಪಕ್ಷ ಉತ್ತರಾಧಿಕಾರಿಯ ಹುಡುಕಾಟದಲ್ಲಿದೆ. ಕಟೀಲ್‌ ಮೇಲೆ ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ಭೇಟಿ ಮಾಡುತ್ತಿಲ್ಲ, ಎಂಬ ಆರೋಪವಿದೆ. ಜನರ ಅಹವಾಲು ಕೇಳುತ್ತಿಲ್ಲ ಎಂಬುದು ಕಾರ್ಯಕರ್ತರ ಪ್ರಮುಖ ಆರೋಪವಾಗಿದೆ, ಸ್ಥಳೀಯ ಬಿಜೆಪಿ ನಾಯಕತ್ವ ಪಕ್ಷದ ಕೆಲವು ಅತೃಪ್ತ ಕಾರ್ಯಕರ್ತರೊಂದಿಗೆ ಮಾತನಾಡುವ ಮೂಲಕ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿತ್ತು.
ಇತ್ತೀಚೆಗೆ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಕಟೀಲ್ ತಡವಾಗಿ ಬಂದಾಗ ಪಕ್ಷದ ಕಾರ್ಯಕರ್ತರು ಕಟೀಲ್ ಅವರ ಕಾರಿನ ಮೇಲೆ ದಾಳಿ ನಡೆಸಿದ್ದರು ಮತ್ತು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಇಡೀ ರಾಜ್ಯದ ಜವಾಬ್ದಾರಿಯನ್ನು ಹೊತ್ತಿರುವ ಪಕ್ಷದ ಮುಖ್ಯಸ್ಥರು ಸಂಸದರಾಗಿ ತಮ್ಮ ಕ್ಷೇತ್ರದಲ್ಲಿ ಪಕ್ಷದ ಕೆಲಸಗಳಿಗೆ ಯಾವಾಗಲೂ ಸ್ಥಳೀಯವಾಗಿ ಲಭ್ಯವಿರುವುದಿಲ್ಲ ಎಂದು ಪಕ್ಷದವರೇ ಹೇಳುತ್ತಿದ್ದಾರೆ.

















































error: Content is protected !!
Scroll to Top