ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ಏಎಸ್‌ಐ ಆತ್ಮಹತ್ಯೆ

ಚಂಡೀಗಢ: ಹಿರಿಯ ಅಧಿಕಾರಿಗಳಿಂದ ಅವಮಾನವಾಗಿದೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ. ಸಾವಿಗೂ ಮುನ್ನ ಅವರು ವೀಡಿಯೊವನ್ನು ಸಹ ರೆಕಾರ್ಡ್ ಮಾಡಿದ್ದು ಅದರಲ್ಲಿ ಅವರು ತಮ್ಮ ಜೀವನವನ್ನು ಅಂತ್ಯಗೊಳಿಸಲು ಕಾರಣವನ್ನು ಹಂಚಿಕೊಂಡಿದ್ದಾರೆ. ಹೋಶಿಯಾರ್‌ಪುರದ ಹರಿಯಾಣಾ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಸತೀಶ್ ಕುಮಾರ್ ಸೆ.8 ರಂದು ತಪಾಸಣೆಯ ವೇಳೆ ತಾಂಡಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಓಂಕಾರ್ ಸಿಂಗ್ ತನ್ನ ಮೇಲೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನನ್ನು ಹೀಗೆ ಅವಮಾನಿಸುವುದಕ್ಕಿಂತ ಸುಮ್ಮನೆ ಗುಂಡು ಹಾರಿಸಿದ್ದರೆ ಚೆನ್ನಾಗಿರುತ್ತಿತ್ತು’ ಎಂದು ಹೇಳಿದ್ದು ವಿಡಿಯೋದಲ್ಲಿ ಕೇಳಿಬಂದಿದೆ. ಹೋಶಿಯಾರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ತಾಜ್ ಸಿಂಗ್ ಚಾಹಲ್ ಅವರು ಕಿರಿಯ ಪೊಲೀಸರಿಗೆ ಯಾವುದೇ ಸಮಸ್ಯೆ ಎದುರಾದರೆ ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.









































































































error: Content is protected !!
Scroll to Top