ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ ದಸರಾ ಯಾರು ಉದ್ಘಾಟನೆ ಮಾಡಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಮೈಸೂರು ದಸರಾ ಸೆ. 26 ರಿಂದ ಆರಂಭಗೊಳ್ಳಲಿದ್ದು, ಅ. 5 ವರೆಗೆ ನಡೆಯಲಿದೆ. ಪ್ರತಿಷ್ಠಿತ ಮೈಸೂರು ದಸರಾಗೆ ಸರ್ಕಾರ ಈಗಾಗಲೇ ಹಲವು ಸುತ್ತಿನ ಪೂರ್ವಭಾವಿ ಸಭೆ ನಡೆಸಿದೆ. ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ನಾಯಕರನ್ನೊಳಗೊಂಡ ಸಮಿತಿ ಹಲವು ಸುತ್ತಿನ ಸಭೆ ನಡೆಸಿದೆ. ಕೊರೋನಾ ಕಾರಣ ಕಳೆದ ವರ್ಷ ಸರಳ ದಸರಾ ಆಚರಿಸಲಾಗಿತ್ತು.















































































































































error: Content is protected !!
Scroll to Top