ಬೆಳ್ಮಣ್‌ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ರಜತ ಮಹೋತ್ಸವ

ಕಾರ್ಕಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬೆಳ್ಮಣ್ ಇದರ ರಜತ ಮಹೋತ್ಸವ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೮ನೇ ಜಯಂತ್ಯುತ್ಸವ ಕಾರ್ಯಕ್ರಮ ಶನಿವಾರ ಬೆಳ್ಮಣ್‌ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಜಾರಿಗೆಕಟ್ಟೆ ಕೊರಗಜ್ಜ ಕೊರಗ ಪಂಜುರ್ಲಿ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಸಚಿವ ವಿ. ಸುನೀಲ್‌ ಕುಮಾರ್‌, ಕನ್ನಡ ಚಲನಚಿತ್ರದ ಖ್ಯಾತ ನಟ ವಿಜಯ ರಾಘವೇಂದ್ರ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್. ರಾಜು, ಉದ್ಯಮಿ ದಿನೇಶ್ ಅಮೀನ್, ಬೆಳ್ಮಣ್‌ ಸಂಘದ ಗೌರವಾಧ್ಯಕ್ಷ ಎಸ್.ಕೆ. ಸಾಲಿಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತ ಪರಮಾನಂದ ಸಾಲಿಯಾನ್ ಉಪನ್ಯಾಸ ನೀಡಿದರು. ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಸತೀಶ್‌ ಎರ್ಮಾಳ್‌ ಅಧ್ಯಕ್ಷತೆ ವಹಿಸಿದ್ದರು.



































































































error: Content is protected !!
Scroll to Top