ಕಲುಷಿತ ನೀರು ಸೇವಿಸಿ 51 ಮಂದಿ ಅಸ್ವಸ್ಥ

ಕಲಬುರಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 51 ಮಂದಿ ಅಸ್ವಸ್ಥರಾಗಿದ್ದಾರೆ.ಕಲುಷಿತ ನೀರಿನಿಂದ ಉಂಟಾದ ಗ್ಯಾಸ್ಟ್ರೋಎಂಟರೈಟಿಸ್‌ ಜನರು ಅಸ್ವಾಥರಾಗಲು ಕಾರಣ ಎಂದು ಆರೋಗ್ಯಾಧಿಕಾರಿ ಹೇಳಿದ್ದಾರೆ.
ನಿನ್ನೆ ಸಂಜೆಯಿಂದ ಮಂದೇವಾಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಾಂತಿಭೇದಿ ಮತ್ತು ಅತಿಸಾರದ ಚಿಕಿರ್ಸೆಗಾಗಿ ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಶನಿವಾರ ಮಧ್ಯಾಹ್ನದವರೆಗೆ ಒಟ್ಟು 51 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಗ್ಯಾಸ್ಟ್ರೋಎಂಟರೈಟಿಸ್‌ನಿಂದಾಗಿ ಮಂದೇವಾಲದ 74 ವರ್ಷದ ತಾಯಪ್ಪ ಎಂಬುವರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಆದರೆ ಇ ಸಾವು ವಯೋಸಹಜ ಕಾಯಿಲೆಗಳಿಂದ ಸಂಭವಿಸಿದೆ ಎಂದು ವೈದ್ಯರು ಹೇಳಿದ್ದಾರೆ.
ಗ್ಯಾಸ್ಟ್ರೋಎಂಟರೈಟಿಸ್‌ ಬರಲು ಕಲುಷಿತ ನೀರಿನ ಸೇವನೆಯೇ ಪ್ರಮುಖ ಕಾರಣ ಎಂದು ಮೂಲಗಳು ತಿಳಿಸಿವೆ. ಕೊಳವೆ ಬಾವಿ ಗಲೀಜು ಜಾಗದಲ್ಲಿದೆ. ಈ ವರ್ಷ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ಸಲ್ಲಿಸಿರುವ ಪ್ರಯೋಗಾಲಯ ಪರೀಕ್ಷೆಯ ವರದಿಯಲ್ಲಿ ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ತಿಳಿಸಲಾಗಿತ್ತು.ಆದರೆ ಬೇರೆ ನೀರಿನ ಮುಲ ಇಲ್ಲದ ಕಾರಣ ಜನರು ಇದೇ ನೀರನ್ನ ಬಳಸುತ್ತಿದ್ದರು.











































error: Content is protected !!
Scroll to Top