ಆರೋಪಿಯನ್ನು ಬಂಧಿಸದಿದ್ದರೆ ಹೋರಾಟದ ಎಚ್ಚರಿಕೆ
ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸೋದರ ಸಂಘ ಪರಿವಾರದ ಸಂಘಟನೆಯೊಂದರ ಮುಖಂಡನಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣ ಕರಾವಳಿಯಲ್ಲಿ ಮತ್ತೆ ಉದ್ವಿಗ್ನತೆಗೆ ಕಾರಣವಾಗಿದೆ. ಈ ಸಂಬಂಧ ಬೆಳ್ಳಾರೆಯ ಹಿಂದು ಕಾರ್ಯಕರ್ತ ಗ್ರಾಮದ ಪ್ರಶಾಂತ್ ಪೂಂಜ ಎಂಬವರು ಶನಿವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್‌ನ ಸಹೋದರ ಶಾಫ್ರಿದ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಶಾಂತ್ ಪೂಂಜಾ ಒತ್ತಾಯಿಸಿದ್ದಾರೆ.
ಪ್ರಶಾಂತ್ ಪೂಂಜಾ ದೂರು ನೀಡಲು ಬಂದಾಗ ಅವರೊಂದಿಗೆ ನೂರಾರು ಹಿಂದೂ ಕಾರ್ಯಕರ್ತರು ಠಾಣೆ ಬಳಿ ಜಮಾಯಿಸಿದ್ದರು.ಶಾಫಿದ್‌ನನ್ನು ಕೂಡಲೇ ಬಂಧಿಸದಿದ್ದರೆ ಹೋರಾಟಮಾಡುವುದಾಗಿ ಹಿಂದು ಕಾರ್ಯಕರ್ತರು ಹೇಳಿದ್ದಾರೆ.
ಪ್ರವೀಣ್ ನೆಟ್ಟಾರು ಕೋಳಿ ಅಂಗಡಿಯಲ್ಲಿ ನೌಕರಿಗಿದ್ದ ವ್ಯಕ್ತಿಯ ಮಕ್ಕಳು ಶಫೀಕ್ ಮತ್ತು ಶಾಫಿದ್.ಶಫೀಕ್‌ನನ್ನು ಪ್ರಕರಣದಲ್ಲಿ ನೇರವಾಗಿ ಶಾಮೀಲಾದ ಆರೋಪದಲ್ಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.






































































