ಕಾರ್ಕಳ ತಾಲೂಕಾಡಳಿತದಿಂದ ವಿಶ್ವಕರ್ಮ ಜಯಂತಿ ಆಚರಣೆ

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಕಾರ್ಕಳ ಮತ್ತು ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ಪೆರ್ವಾಜೆ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಇಂದು ಬೆಳಗ್ಗೆ ಕಾರ್ಕಳ ತಾಲೂಕು ಆಡಳಿತ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಡುಕುತ್ಯಾರು ಮಠದ ಪವನ್ ಶರ್ಮ ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಅತ್ತೂರು, ತಹಶೀಲ್ದಾರ ಪ್ರದೀಪ್‌ ಕುರ್ಡೇಕರ್‌, ತಾ. ಪಂ. ಮುಖ್ಯ ಕಾರ್ಯನಿರ್ವಹಾಣಧಿಕಾರಿ ಗುರುದತ್‌ ಎನ್.‌, ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳನಾಡಿದ ತಾಲೂಕು ದಂಡಾಧಿಕಾರಿ ಉಪಸ್ಥಿತರಿದ್ದ ಗಣ್ಯರನ್ನು ಸ್ವಾಗತಿಸಿದರು. ರಿಯಾಜ್‌ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.









































































































error: Content is protected !!
Scroll to Top