ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಉಪ್ಪಿನಂಗಡಿ ಸಮೀಪ ಪಂಜಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಕಾಣಿಸಿಕೊಂಡಿರುವುದು ಸ್ಥಳೀಯ ಜನರಲ್ಲಿ ಆತಂಕ ಹುಟ್ಟಿಸಿದೆ.
ರಾಷ್ಟ್ರೀಯ ಹೆದ್ದಾರಿ ಬದಿಯಿರುವ ಪೆಟ್ರೋಲ್ ಬಂಕ್ ಸಮೀಪ ಮೊಸಳೆಗಳು ಕಾಣಿಸಿಕೊಂಡಿವೆ. ನದಿ ಮಧ್ಯೆ ಇರುವ ಕುರುಚಲು ಪೊದೆ ಬೆಳೆದಿರುವ ದಿಬ್ಬದಲ್ಲಿ ಮೊಸಳೆಗಳನ್ನು ನೋಡಿ ಜನರು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ 3 ಮೊಸಳೆ ಪತ್ತೆ:ಸ್ಥಳೀಯರಲ್ಲಿ ಆತಂಕ


































































