Saturday, October 1, 2022
spot_img
Homeಸುದ್ದಿಶಿರ್ವದಲ್ಲಿ ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಢಿಕ್ಕಿ : ತಂದೆ ಸಾವು

ಶಿರ್ವದಲ್ಲಿ ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಢಿಕ್ಕಿ : ತಂದೆ ಸಾವು

ಶಿರ್ವ: ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್ ಬಳಿ ರಸ್ತೆ ದಾಟಲು ನಿಂತಿದ್ದ ತಂದೆ ಮತ್ತು ಮಗನಿಗೆ ಬೈಕ್ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಸೆ. 21ರಂದು ರಾತ್ರಿ ನಡೆದಿದೆ.
ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಗಾಯಗೊಂಡವರು. ಶರಣಪ್ಪ ಪುತ್ರ ಶ್ರವಣಕುಮಾರನೊಂದಿಗೆ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿರುವಾಗ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಬೈಕನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.
ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಸೇರಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ಗಂಭೀರ ಗಾಯಗೊಂಡು ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಾದ ಶರಣಪ್ಪ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ಒಳರೋಗಿಯಾಗಿ ದಾಖಲಾಗಿದ್ದು, ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!