Saturday, October 1, 2022
spot_img
Homeರಾಜ್ಯಅಮಿತ್ ಶಾ ಉನ್ನತ ಮಟ್ಟದ ಸಭೆ

ಅಮಿತ್ ಶಾ ಉನ್ನತ ಮಟ್ಟದ ಸಭೆ

ಹೊಸದಿಲ್ಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಮಾರು 13 ರಾಜ್ಯಗಳಲ್ಲಿ ಪಿಎಫ್‌ಐ, ಎಸ್‌ಡಿಪಿಐ ನಾಯಕರು ಹಾಗೂ ಅವರ ಕಚೇರಿಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆ. 22 ರಂದು ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ದಾಳಿಗಳಲ್ಲಿ ಸಂಗ್ರಹಿಸಿದ ಪುರಾವೆಗಳ ಪರಾಮರ್ಶೆ ಮತ್ತು ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಅಮಿತ್ ಶಾ ಅವರು ಸಂಬಂಧಿತ ಸಂಸ್ಥೆಗಳು ಹಾಗೂ ಭದ್ರತಾ ಮುಖ್ಯಸ್ಥರ ಜತೆ ಮಾತುಕತೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ದಿನಕರ್ ಗುಪ್ತಾ ಹಾಗೂ ಇತರೆ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.
ದೇಶದೆಲ್ಲೆಡೆ ಶಂಕಿತ ಭಯೋತ್ಪಾದಕರು ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಅಮಿತ್ ಶಾ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ.
ಗುಪ್ತಚರ ದಳ ಸಂಗ್ರಹಿಸಿದ ವಿವರಗಳು ಮತ್ತು ತೀವ್ರ ಸ್ವರೂಪದ ತನಿಖೆಗಳ ಆಧಾರದಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಮೇಲೆ ಗುರುವಾರ ದಾಳಿಗಳು ನಡೆದಿವೆ. ಎನ್‌ಐಎ ಮತ್ತು ಇ.ಡಿ ಸಂಸ್ಥೆಗಳಿಗೆ ಸ್ಥಳೀಯ ಪೊಲೀಸರು ಕೂಡ ನೆರವಾಗಿದ್ದು, ರಾತ್ರೋರಾತ್ರಿ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ.
ಈ ದಾಳಿ ಸಂದರ್ಭದಲ್ಲಿ ದೇಶಾದ್ಯಂತ ನೂರಾರು ಮಂದಿಯನ್ನು ಬಂಧಿಸಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 20, ಕೇರಳದಲ್ಲಿ 22, ಅಸ್ಸಾಂನಲ್ಲಿ 9, ಆಂಧ್ರಪ್ರದೇಶ 5, ದಿಲ್ಲಿ 3, ಮಧ್ಯಪ್ರದೇಶ 4, ಪುದುಚೆರಿ 3, ತಮಿಳುನಾಡು 10, ಉತ್ತರ ಪ್ರದೇಶ 8 ಮತ್ತು ರಾಜಸ್ಥಾನದಲ್ಲಿ 2 ಮಂದಿಯನ್ನು ಬಂಧಿಸಲಾಗಿದೆ.
ಈ ದಿನಗಳವರೆಗೆ ತನಿಖಾ ಸಂಸ್ಥೆಗಳ ಇತಿಹಾಸದಲ್ಲಿಯೇ ಇದು ಅತ್ಯಂತ ಬೃಹತ್ ದಾಳಿಯಾಗಿದೆ. ಭಯೋತ್ಪಾದನೆಗೆ ಹಣಕಾಸಿನ ನೆರವು, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ಉಗ್ರ ಸಂಘಟನೆಗಳನ್ನು ಸೇರಿಕೊಳ್ಳುವಂತೆ ಜನರಲ್ಲಿ ಪ್ರಚೋದನೆ ನೀಡುವ ಚಟುವಟಿಕೆಗಳಲ್ಲಿ ಭಾಗಿಯಾದ ವ್ಯಕ್ತಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆದಿವೆ.

LEAVE A REPLY

Please enter your comment!
Please enter your name here

Most Popular

error: Content is protected !!