Saturday, October 1, 2022
spot_img
Homeಸುದ್ದಿರತನ್‌ ಟಾಟಾ, ಸುಧಾ ಮೂರ್ತಿ ಪಿಎಂ ಕೇರ್ಸ್‌ ನಿಧಿಗೆ ನೇಮಕ

ರತನ್‌ ಟಾಟಾ, ಸುಧಾ ಮೂರ್ತಿ ಪಿಎಂ ಕೇರ್ಸ್‌ ನಿಧಿಗೆ ನೇಮಕ


ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಉಲ್ಬಣಗೊಳ್ಳಲು ಪ್ರಾರಂಭಿಸಿದಾಗ ಜಜನಸಾಮಾನ್ಯರಿಗೆ ನೆರವಾಗುವ ಉದ್ದೇಶದಿಂದ ದೇಣಿಗೆ ಸಂಗ್ರಹಿಸಲು ಪ್ರಾರಂಭಿಸಲಾಗಿದ್ದ ಪ್ರಧಾನಮಂತ್ರಿಯವರ ನಾಗರಿಕರ ತುರ್ತು ನೆರವು ಮತ್ತು ಪರಿಹಾರ ನಿಧಿ (Prime Minister’s Citizen Assistance and Relief in Emergency Situations Fund) ಅಥವಾ ಸಂಕ್ಷಿಪ್ತವಾಗಿ ಪಿಎಂ ಕೇರ್ಸ್ ಫಂಡ್ ನ ಟ್ರಸ್ಟಿಯಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಹಾಗೂ ಸಲಹಾ ಮಂಡಳಿಗೆ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಪಿಎಂ ಕೇರ್ಸ್ ಫಂಡ್ ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕೆ. ಟಿ. ಥಾಮಸ್, ಮಾಜಿ ಡೆಪ್ಯುಟಿ ಸ್ಪೀಕರ್ ಕರಿಯಾ ಮುಂಡಾ ಅವರು ನಾಮನಿರ್ದೇಶನಗೊಂಡಿದ್ದಾರೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಟ್ರಸ್ಟಿಗಳನ್ನು ಪಿಎಂ ಕೇರ್ಸ್ ಫಂಡ್‌ನ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸಲು ಸ್ವಾಗತಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಿಎಂ ಕೇರ್ಸ್‌ ಫಂಡ್‌ನ ಇತರ ಟ್ರಸ್ಟಿಗಳಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಹೊರಡಿಸಲಾಗಿದೆ. ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್(ಸಿಎಜಿ) ರಾಜೀವ್ ಮೆಹ್ರಿಷಿ, ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನೂ ಪಿಎಂ ಕೇರ್ಸ್ ಫಂಡ್‌ನ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!