Saturday, October 1, 2022
spot_img
Homeಸ್ಥಳೀಯ ಸುದ್ದಿಕ್ರೈಸ್ಟ್‌ಕಿಂಗ್‌ ಶಿಕ್ಷಕಿ ಲಾವಣ್ಯ ಶೆಟ್ಟಿ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

ಕ್ರೈಸ್ಟ್‌ಕಿಂಗ್‌ ಶಿಕ್ಷಕಿ ಲಾವಣ್ಯ ಶೆಟ್ಟಿ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

ಕಾರ್ಕಳ : ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರು ದಸರಾ ಸಂದರ್ಭ ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಲಾವಣ್ಯ ಅವರು ಮೈಸೂರು ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.

ದಿಶಾ – ನೇಹಾ ರಾಜ್ಯಮಟ್ಟಕ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಹಾಗೂ ಶ್ರೀ ವಾಣಿ ಅನುದಾನಿತ ಪ್ರೌಢಶಾಲೆ ಬ್ರಹ್ಮಾವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್‌ ಆಂಗ್ಲಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ೯ನೇ ತರಗತಿ ವಿದ್ಯಾರ್ಥಿನಿ ದಿಶಾ ಡಿ’ಮೆಲ್ಲೊ ಹಾಗೂ ನೇಹಾ ವಿ. ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಜೂನಿಯರ್‌ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಇದೇ ಶಾಲೆಯ ಪದವಿ ಪೂರ್ವ ಕಾಲೇಜಿನ ಮಿಶಲ್ ಡಿ’ಸೋಜಾ ಮತ್ತು ಅಂಕಿತಾ ಶೆಟ್ಟಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!