Saturday, October 1, 2022
spot_img
Homeಸ್ಥಳೀಯ ಸುದ್ದಿಕಾರ್ಕಳ ಪುರಸಭೆಯಲ್ಲಿ ಪೌರಕಾರ್ಮಿಕ ದಿನಾಚರಣೆ

ಕಾರ್ಕಳ ಪುರಸಭೆಯಲ್ಲಿ ಪೌರಕಾರ್ಮಿಕ ದಿನಾಚರಣೆ

ಕಾರ್ಕಳ : ಪುರಸಭೆಯ ವತಿಯಿಂದ ಸೆ. 22ರಂದು ಪೌರ ಕಾರ್ಮಿಕರ ದಿನಾಚರಣೆಯನ್ನು ಪುರಸಭಾ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಕಳ ಬಿಲ್ಲವ ಸಂಘದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಆಟೋಟ ಸ್ಪರ್ಧೆಯನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಪುರಸಭೆಯ ಎಲ್ಲ ಪೌರ ಕಾರ್ಮಿಕರನ್ನು ಗೌರವಿಸಲಾಯಿತು. ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೀಶ್ ದೇವಾಡಿಗ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವಸಂತ ಪಿ. ಮತ್ತು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!