Saturday, October 1, 2022
spot_img
Homeಸುದ್ದಿಭಾರತದಲ್ಲಿ ಷರಿಯಾ ಕಾನೂನು ಜಾರಿ ಗುರಿ

ಭಾರತದಲ್ಲಿ ಷರಿಯಾ ಕಾನೂನು ಜಾರಿ ಗುರಿ

ಶಿವಮೊಗ್ಗದ ಶಂಕಿತ ಉಗ್ರರು ಬಾಯಬಿಟ್ಟ ಮಾಹಿತಿ

ಶಿವಮೊಗ್ಗ: ದೇಶದಲ್ಲಿ ಷರಿಯಾ ಕಾನೂನು ಜಾರಿಗೊಳಿಸಿ ಇಸ್ಲಾಮೀಕರಣಗೊಳಿಸುವುದು, ಇದಕ್ಕಾಗಿ ಐಸಿಸ್‌ ಚಟುವಟಿಕೆಗಳನ್ನು ಹೆಚ್ಚಿಸುವುದು ಉಗ್ರರ ಗುರಿ ಎಂಬ ಆಘಾತಕಾರಿ ಅಂಶ ಇಬ್ಬರು ಶಂಕಿತ ಉಗ್ರರ ವಿಚಾರಣೆಯಿಂದ ಬಹಿರಂಗವಾಗಿದೆ. ಭಾರತದಲ್ಲಿ ಅಸ್ತಿತ್ವಕ್ಕಾಗಿ ಪ್ರಯತ್ನಿಸುತ್ತಿರುವ ಐಸಿಸ್ ಹೆಚ್ಚೆಚ್ಚು ಸದಸ್ಯರನ್ನು ಸೇರಿಸಿಕೊಳ್ಳಲು ಪಿಎಫ್‌ಐ ಸಹಾಯ ಕೋರಿತ್ತು ಎಂಬ ಅಂಶ ವಿಚಾರಣೆ ವೇಳೆ ಇಭ್ಯವಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ಶಿವಮೊಗ್ಗದಲ್ಲಿ ಬಂಧಿಸಲಾದ ಇಬ್ಬರು ಶ<ಕಿತ ಉಗ್ರರಾದ ಮಾಝ್ ಮತ್ತು ಸಯೀದ್ ಯಾಸೀನ್ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಎಸ್ಐಎಸ್) ಪರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಸಂಚು ರೂಪಿಸಲು ಯತ್ನಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಯೋತ್ಪಾದಕ ಕೃತ್ಯಗಳ ಮೂಲಕ ಭಾರತದ ಏಕತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಭಂಗ ತರಲು ಬಂಧಿತರು ಸಂಚು ರೂಪಿಸುತ್ತಿದ್ದರು ಎಂಬುದು ಶಿವಮೊಗ್ಗ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ತಲೆಮರೆಸಿಕೊಂಡಿರುವ ಪ್ರಮುಖ ಶಂಕಿತ ಶಾರಿಕ್ ಸೊಪ್ಪುಗುಡ್ಡೆ ಜತೆಗೆ ಇಬ್ಬರು ಶಂಕಿತರು ಐಸಿಸ್‌ನ ಅಧಿಕೃತ ಮಾಧ್ಯಮ ಕೇಂದ್ರ ಅಲ್-ಹಯಾತ್‌ನ ಸದಸ್ಯರಾಗಿದ್ದರು ಎನ್ನಲಾಗಿದೆ. ಶಿವಮೊಗ್ಗದಲ್ಲಿ ಆರೋಪಿಗಳಿಂದ ಬಾಂಬ್ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯಾಸೀನ್ ಮತ್ತು ಮಾಜ್ ಪಿಯುಸಿ ಓದುತ್ತಿದ್ದರು. ಮಾಜ್ ಮೂಲಕ ಶಾರಿಕ್‌ಗೆ ಯಾಸೀನ್ ಪರಿಚಯವಾಗಿತ್ತು. ಯಾಸೀನ್ ಮಾಜ್ ಮತ್ತು ಶಾರಿಕ್ ಅವರನ್ನು ಭೇಟಿಯಾದಾಗಲೆಲ್ಲಾ ಅವರು ಜಿಹಾದ್‌ನ ಮೂಲಭೂತ ವಿಚಾರಗಳು ಮತ್ತು ಪರಿಕಲ್ಪನೆಗಳ ಬಗ್ಗೆ ಚರ್ಚಿಸುತ್ತಿದ್ದರು. ಶಾರಿಕ್ ಪಿಡಿಎಫ್ ಫೈಲ್‌ಗಳು, ವಿಡಿಯೋ ಮತ್ತು ಆಡಿಯೊ ಕ್ಲಿಪ್‌ಗಳನ್ನು ಕಳುಹಿಸುತ್ತಿದ್ದ. ಉಗ್ರವಾದ, , ಐಸಿಸ್‌ನ ಕೆಲಸಗಳು ಮತ್ತು ಇತರ ಭಯೋತ್ಪಾದನೆಗೆ ಸಂಬಂಧಿಸಿದ ಲಿಂಕ್‌ಗಳನ್ನು ಯಾಸಿನ್‌ಗೆ ಟೆಲಿಗ್ರಾಮ್, ಸಿಗ್ನಲ್, ಇನ್‌ಸ್ಟಾಗ್ರಾಮ್, ವೈರ್, ಎಲಿಮೆಂಟ್ ಮುಂತಾದ ಮೆಸೆಂಜರ್ ಅಪ್ಲಿಕೇಶನ್‌ಗಳ ಮೂಲಕ ಕಳುಹಿಸುತ್ತಿದ್ದ.

LEAVE A REPLY

Please enter your comment!
Please enter your name here

Most Popular

error: Content is protected !!