ಪಿಎಫ್‌ಐ ಬಂದ್‌ನಲ್ಲಿ ಭಾರಿ ಹಿಂಸಾಚಾರ, ಬಸ್‌ಗಳಿಗೆ ಕಲ್ಲು ತೂರಾಟ

ತಿರುವನಂತಪುರಂ: ರಾಷ್ಟ್ರೀಯ ತನಿಖಾ ಸಂಸ್ಥೆ ನಿನ್ನೆ ದೇಶಾದ್ಯಂತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಎಸ್‌ಡಿಪಿಐ ವಿರುದ್ಧ ನಡೆಸಿದ ಕಾರ್ಯಾಚರಣೆಯನ್ನು ಪ್ರತಿಭಟಿಸಿ ಇಂದು ನಡೆದ ಕೇರಳ ಬಂದ್‌ನಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ. ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಆರೋಪದ ಮೇರೆಗೆ ಗುರುವಾರ ರಾಷ್ಟ್ರೀಯ ತನಿಖಾ ದಳ ಪಿಎಫ್‌ಐ ಸಂಘಟನೆಯ ಮುಖಂಡರ ನಿವಾಸದ ಮೇಲೆ ದಾಳಿ ನಡೆಸಿ ಕೆಲವರನ್ನು ಬಂಧಿಸಿದೆ.
ತಿರುವನಂತಪುರಂ, ಕೊಲ್ಲಂ, ಕೊಝಿಕೋಡ್, ವಯನಾಡು ಮತ್ತು ಆಲಪ್ಪುಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಪಿಎಫ್‌ಐ ಮತಾಂಧರು ಕಲ್ಲು ತೂರಿದ್ದಾರೆ. ಕಣ್ಣೂರು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನ್ಯೂಸ್ ಪೇಪರ್ ಕೊಂಡೊಯ್ಯುತ್ತಿದ್ದ ವಾಹನವೊಂದರ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಬಗ್ಗೆ ವರದಿಯಾಗಿದೆ.
ಆಲಪ್ಪುಳದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳು, ಟ್ಯಾಂಕರ್ ಲಾರಿ ಮತ್ತಿತರ ವಾಹನಗಳ ಮೇಲೆ ಕಲ್ಲು ಎಸೆತದಿಂದ ಹಾನಿಯಾಗಿವೆ. ಕೋಝಿಕೋಡ್ ಮತ್ತು ಕಣ್ಣೂರಿನಲ್ಲಿ ಕ್ರಮವಾಗಿ ಪಿಎಫ್‌ಐ ಕಾರ್ಯಕರ್ತರ ಕಲ್ಲು ಎಸೆತದಿಂದ 15 ವರ್ಷದ ಬಾಲಕಿ ಹಾಗೂ ಆಟೋ ರೀಕ್ಷಾ ಚಾಲಕರೊಬ್ಬರಿಗೆ ಗಾಯವಾಗಿದೆ.

error: Content is protected !!
Scroll to Top