ಶಿವಪುರ ಬಿಲ್ಲವರ ಸಂಘದಿಂದ ನಾರಾಯಣ ಗುರು ಜಯಂತಿ ಆಚರಣೆ

ಹೆಬ್ರಿ: ಬಿಲ್ಲವರ ಸೇವಾ ಸಂಘ ಶಿವಪುರ ಆಶ್ರಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳ‌ 168ನೇ ಜಯಂತಿ ಆಚರಣೆ ಶ್ರೀ ಶಂಕರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶೇಖರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ, ಶಿಕ್ಷಕ ಹರೀಶ್ ಪೂಜಾರಿ ಹಾಗೂ ನಾರಾಯಣ ಗುರು ವಿಚಾರ ವೇದಿಕೆಯ ಕಾರ್ಕಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಕಳ ತಾಲೂಕು ಅಧ್ಯಕ್ಷ ಶ್ರೀನಿವಾಸ ಪೂಜಾರಿ ಯರ್ಲಪಾಡಿ, ಶಿವಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತಾ ರಾಘವೇಂದ್ರ, ಹೆಬ್ರಿ ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ರಮೇಶ್ ಕುಮಾರ್ , ಹಿರಿಯ ಗರಡಿ ಪೂಜಾರಿ ವಿಠಲ ಪೂಜಾರಿ ಯಡ್ದೆ ಉಪಸ್ಥಿತರಿದ್ದರು.
ಅತಿಥಿಗಳ ಸನ್ಮಾನ, ವಿವಿಧ ಕ್ರೀಡಾ ಚಟುವಟಿಕೆಗಳು, ವಿದ್ಯಾರ್ಥಿ ವೇತನ ವಿತರಣೆ, ಪುಸ್ತಕ ವಿತರಣೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಸಂಘದ ಕೋಶಾಧಿಕಾರಿ ಹರೀಶ್ ಪೂಜಾರಿ ಸ್ವಾಗತಿಸಿದರು. ಉಮೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು, ಮಹಿಳಾ ವಿಭಾಗದ ಕಾರ್ಯದರ್ಶಿ ವಂದನಾ ಸುಧೀರ್ ಧನ್ಯವಾದ ಅರ್ಪಿಸಿದರು.









































































































error: Content is protected !!
Scroll to Top