ಪಶು ವೈದ್ಯಕೀಯ ಸಹಾಯಕರು ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅ.5ರಿಂದ ನ.4 ತನಕ ಅರ್ಜಿಗಳನ್ನು ಸಲ್ಲಿಸಬಹುದು.
ಒಟ್ಟು 250 ಹುದ್ದೆಗಳನ್ನು ಪ್ರಾಧಿಕಾರವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಭರ್ತಿ ಮಾಡುತ್ತಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗೆ ಅಭ್ಯರ್ಥಿಯು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್‌ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರ ನಡೆಸುವ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ (ಜೆಒಸಿ ಇನ್ ಡೈರಿಯಲ್ಲಿ ಉರ್ತ್ತೀರ್ಣರಾಗಿರಬೇಕು.
ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು. ಪ್ರವರ್ಗ- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಪ.ಜಾ, ಪ.ಪಂ., ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು ವಯೋಮಿತಿ ನಿಗದಿ ಮಾಡಲಾಗಿದೆ.
ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಹೊಂದಲು ಅಭ್ಯರ್ಥಿಯು 1 ರಿಂದ 10 ನೇ ತರಗತಿವರೆಗೆ/ ಪಿಯುಸಿ / ಡಿಪ್ಲೊಮಾ / ಪದವಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರತಕ್ಕದ್ದು ಅಥವಾ ಎಸ್. ಎಸ್. ಎಲ್. ಸಿ / 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯಯವನ್ನಾಗಿ ವಾಸಂಗ ಮಾಡಿ ತೇರ್ಗಡೆ ಹೊಂದಿರತಕ್ಕದ್ದು.





























































































































































































































error: Content is protected !!
Scroll to Top