Tuesday, December 6, 2022
spot_img
Homeಸುದ್ದಿಇಂದು ಭಾರಿ ನಿರೀಕ್ಷೆಯ 5ಜಿ ಲಾಂಚ್‌

ಇಂದು ಭಾರಿ ನಿರೀಕ್ಷೆಯ 5ಜಿ ಲಾಂಚ್‌

ಎಲ್ಲೆಲ್ಲಿ ಸಿಗಲಿದೆ ಹೈಸ್ಪೀಡ್‌ ಇಂಟರ್‌ನೆಟ್‌ ಸೇವೆ?

ಹೊಸದಿಲ್ಲಿ: ಭಾರತದಲ್ಲಿ ಬಹುನಿರೀಕ್ಷಿತ 5ಜಿ ಇಂಟರ್‌ನೆಟ್‌ಗೆ ಇಂದು ಚಾಲನೆ ಸಿಗಲಿದೆ. ಇಂಡಿಯಾ ಮೊಬೈಲ್ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಲಿದ್ದಾರೆ. ಆರಂಭದಲ್ಲಿ ಆಯ್ದ ಕೆಲ ಮೆಟ್ರೊ ನಗರಗಳಲ್ಲಿ ಮಾತ್ರ 5ಜಿ ಸೇವೆ ಸಿಗಲಿದೆ. ಮುಂದಿನ ಕೆಲ ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲೂ 5ಜಿ ದೊರಕಲಿದೆಯಂತೆ.
ಮೊದಲ ಭಾಗವಾಗಿ ದೇಶದ 13 ನಗರಗಳಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ಅಹಮದಾಬಾದ್, ಬೆಂಗಳೂರು, ಚಂಡೀಗಢ, ಚೆನ್ನೈ, ದೆಹಲಿ, ಗಾಂಧಿನಗರ, ಗುರುಗ್ರಾಮ್, ಹೈದರಾಬಾದ್, ಜಾಮ್‍ನಗರ, ಕೋಲ್ಕತ್ತಾ, ಲಕ್ನೋ, ಮುಂಬೈ ಮತ್ತು ಪುಣೆಯಲ್ಲಿ ಮೊದಲ ಹಂತದ 5ಜಿ ಸೇವೆ ಆರಂಭವಾಗಲಿದೆ. ಈ ನಗರಗಳಲ್ಲಿ ಆಯ್ದ ಕೆಲ ಪ್ರದೇಶಗಳಲ್ಲಿ ಜನರಿಗೆ 5ಜಿ ಸೇವೆ ದೊರಕುವ ಸಾಧ್ಯತೆ ಇದೆ.
ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ , ದೂರಸಂಪರ್ಕ ಇಲಾಖೆ ಮತ್ತು ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ 5ಜಿ ಲಾಂಚ್ ಆಗಲಿದೆ.
5G ಲಾಂಚ್​ಗೆ ಸಿದ್ಧತೆ ನಡೆಯುತ್ತಿರುವಾಗಲೇ 6ಜಿ ಸೇವೆ ಕೂಡ ಘೋಷಣೆ ಆಗಿದೆ. ಇತ್ತೀಚೆಗಷ್ಟೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2030ರ ಒಳಗಾಗಿ 6ಜಿ ಸೇವೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ತಂತ್ರಜ್ಞಾನಗಳ ಬೆಳವಣಿಗೆ ಸಾಕಷ್ಟು ವೇಗವಾಗಿ ನಡೆಯುತ್ತಿದೆ. ಈಗಾಗಲೇ ಡ್ರೋನ್​ಗಳನ್ನು ಕೃಷಿ ಮತ್ತು ಆರೋಗ್ಯ ವಿಭಾಗದಲ್ಲಿ ಬಳಕೆ ಮಾಡಲಾಗುತ್ತಿದೆ. ದೇಶದಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನಗಳ ಬೆಳವಣಿಗೆಯಿಂದ ಯುವ ಸಮೂಹಕ್ಕೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!