ಡಿಕೆಶಿಗೆ ಮತ್ತೆ ಇಡಿ ಸಮನ್ಸ್‌: ಅ.7ಕ್ಕೆ ವಿಚಾರಣೆ

ಬೆಂಗಳೂರು: ಭಾರತ್‌ ಜೋಡೊ ಯಾತ್ರೆಯ ಸಂಭ್ರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶೀವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ದೊಡ್ಡ ಶಾಕ್‌ ನೀಡಿದೆ. ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಪ್ರಮುಖ ಆರೋಪಿಸಗಳಾಗಿರುವ ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಅ.7ರಂದು ವಿಚಾರಣೆಗೆ ಹಾಜರಾಗಲು ಡಿಕೆಶಿ ಮತ್ತು ವರ ಸಹೋದರ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌ ಜಾರಿ ಮಾಡಿದೆ.
ಈ ವಿಚಾರವನ್ನು ಸ್ವತಹ ಡಿಕೆಶಿಯವರೇ ಬಹಿರಂಗಪಡಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನನಗೆ ಹಾಗೂ ತಮ್ಮ ಡಿ.ಕೆ.ಸುರೇಶ್ ಅವರಿಗೆ ನೋಟಿಸ್ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ ಅಧಿಕಾರಿಗಳು ಆಗಲ್ಲ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಕೇಸ್​​ನಲ್ಲಿ ಹೊಸ ಸಮನ್ಸ್ ಕೊಟ್ಟಿದ್ದಾರೆ. 7ನೇ ತಾರೀಖು ನನಗೆ ಹಾಗೂ ಡಿ.ಕೆ. ಸುರೇಶ್‌ಗೆ ನೋಟಿಸ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅಂದು ಆದಿಚುಂಚನಗಿರಿಗೆ ಹೋಗುತ್ತಿದ್ದಾರೆ. 7ನೇ ತಾರೀಕು ಬಿಟ್ಟು ಬೇರೆ ದಿನ ಕೊಡಿ ಅಂತ ಇನ್ನೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ಡಿಕೆಶಿ ಹೇಳಿದ್ದಾರೆ.
ಆದಿಚುಂಚನಗಿರಿಗೆ ಪ್ರಿಯಾಂಕ ಗಾಂಧಿ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ನಾನು ಇಲ್ಲದೇ ಹೋದ್ರೆ ತಪ್ಪಾಗುತ್ತದೆ. ಎಲ್ಲ ಜವಾಬ್ದಾರಿ ನನ್ನ ತಮ್ಮನೇ ಮಾಡುತ್ತಿದ್ದಾನೆ. ಇಲ್ಲಿಂದ ಅಲ್ಲಿಯವರಗೂ ಬ್ಯಾನರ್ ಕಟ್ಟುತ್ತಿದ್ದಾನೆ. ಆದಿಚುಂಚನಗಿರಿಯಲ್ಲಿ ರಾಹುಲ್ ಗಾಂಧಿ ತಂಗಲಿದ್ದಾರೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಇಂದು ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು? ಇಡೀ ಕಾಂಗ್ರೆಸ್ ಪಕ್ಷ ಜಾಮೀನು ಪಡೆದು ಹೊರಗಿದೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ ಜಾಮೀನಿನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಆಗಿತ್ತು, ಈಗ ಅದು ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು (ಬಿಜೆಪಿ) ಕೂಡ ಜಾಮೀನಿನ ಮೇಲೆ ಹತ್ತಾರು ಮಂದಿ ಹೊರಗೆ ಇದ್ದಾರೆ. ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಬೊಮ್ಮಾಯಿ ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ನನ್ನನ್ನು ಪರಪ್ಪನ ಅಗ್ರಹಾರಕ್ಕೆ (ಕೇಂದ್ರ ಕಾರಾಗೃಹ) ಕಳುಹಿಸಲಿ, ನಾನು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.





























































































































































































































error: Content is protected !!
Scroll to Top