Thursday, December 1, 2022
spot_img
Homeಸುದ್ದಿಭೀಕರ ಅಪಘಾತ : 4 ಮಕ್ಕಳ ಸಹಿತ 9 ಸಾವು

ಭೀಕರ ಅಪಘಾತ : 4 ಮಕ್ಕಳ ಸಹಿತ 9 ಸಾವು

ಧರ್ಮಸ್ಥಳದಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ದುರ್ಘಟನೆ

ಹಾಸನ: ಸರ್ಕಾರಿ ಬಸ್, ಟೆಂಪೊ ಟ್ರಾವೆಲರ್ ಮತ್ತು ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 9 ಜನರು ದುರ್ಮರಣ ಹೊಂದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಾಂಧಿನಗರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಸಿಲುಕಿದ ಟೆಂಪೋ ಟ್ರಾವೆಲರ್ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮದವರು ಎನ್ನಲಾಗಿದೆ.
ಟೆಂಪೋ ಟ್ರಾವೆಲರ್‌ನಲ್ಲಿದ್ದವರು ಧರ್ಮಸ್ಥಳಕ್ಕೆ ಹೋಗಿ ತಮ್ಮೂರಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಐದಾರು ಕಿಲೋಮೀಟರ್ ಕ್ರಮಿಸಿದ್ದರೆ ಊರು ತಲುಪುತ್ತಿದ್ದರು ಅಷ್ಟರಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮೃತರಲ್ಲಿ ನಾಲ್ವರು ಮಕ್ಕಳು ಕೂಡ ಸೇರಿದ್ದಾರೆ.
ಸಾವಿನ ಸಂಖ್ಯೆ ಮತ್ತಷ್ಟ ಹೆಚ್ಟಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಬಾಣಾವರ ಠಾಣೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!