Thursday, December 1, 2022
spot_img
Homeಸುದ್ದಿತ್ಯಾಜ್ಯ ನಿರ್ವಹಣೆ ವೈಫಲ್ಯ: ಕರ್ನಾಟಕಕ್ಕೆ 2,900 ಕೋ.ರೂ.ದಂಡ

ತ್ಯಾಜ್ಯ ನಿರ್ವಹಣೆ ವೈಫಲ್ಯ: ಕರ್ನಾಟಕಕ್ಕೆ 2,900 ಕೋ.ರೂ.ದಂಡ

ಘನ, ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಭಾರಿ ಲೋಪ ಎಂದ ಹಸಿರು ನ್ಯಾಯ ಮಂಡಳಿ

ಹೊಸದಿಲ್ಲಿ: ಪರಿಸರಕ್ಕೆ ಹಾನಿ ಉಂಟುಮಾಡುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ಮಾಡದ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕರ್ನಾಟಕಕ್ಕೆ 2,900 ಕೋಟಿ ರೂಪಾಯಿ ದಂಡ ವಿಧಿಸಿದೆ.
ಅನುಷ್ಠಾನದ ಹೊಣೆಗಾರಿಕೆಯನ್ನು ನಿಗದಿಪಡಿಸದೆ, ಕೇವಲ ಆದೇಶಗಳನ್ನು ರವಾನಿಸುವುದರಿಂದ ಕಳೆದ ಎಂಟು ವರ್ಷಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಮತ್ತು ಐದು ವರ್ಷಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆಗಾಗಿ ಶಾಸನಬದ್ಧ ಅವಧಿ ಮುಗಿದ ನಂತರವೂ ಯಾವುದೇ ಸ್ಪಷ್ಟವಾದ ಫಲಿತಾಂಶಗಳನ್ನು ತೋರಿಸಿಲ್ಲ. ಹೀಗಾಗಿ ಹಾನಿಯನ್ನು ತಡೆಗಟ್ಟುವ ಅಗತ್ಯವಿದೆ ಮತ್ತು ಹಿಂದಿನ ಹಾನಿಯನ್ನುಸರಿಪಡಿಸಬೇಕು ಎಂದು ನ್ಯಾಯಮಂಡಳಿ ಹೇಳಿದೆ.
ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ಪೀಠ ಅಕ್ಟೋಬರ್ 13ರಂದು ಹೊರಡಿಸಿದ ಆದೇಶದಲ್ಲಿ, ಕರ್ನಾಟಕ ರಾಜ್ಯವು ಪಾವತಿಸಬೇಕಾದ ಪರಿಹಾರವನ್ನು ನಾವು ನಿರ್ಧರಿಸುತ್ತೇವೆ ಎಂದು ಹೇಳಿತ್ತು.
2,900 ಕೋಟಿಯನ್ನು ಕರ್ನಾಟಕ ಸರ್ಕಾರ ಎರಡು ತಿಂಗಳೊಳಗೆ ಪ್ರತ್ಯೇಕ ಖಾತೆಯಲ್ಲಿ ಠೇವಣಿ ಇಡಬೇಕು. ಮುಖ್ಯ ಕಾರ್ಯದರ್ಶಿಯ ನಿರ್ದೇಶನದಂತೆ ಕಾರ್ಯನಿರ್ವಹಿಸಲು ಮತ್ತು ಆರು ತಿಂಗಳೊಳಗೆ ಪುನಃಸ್ಥಾಪನೆ ಕ್ರಮಗಳಿಗೆ ಇದನ್ನು ಬಳಸಿಕೊಳ್ಳಬಹುದು ಎಂದು ಹೇಳಿದೆ.
ಬೆಂಗಳೂರು ಹೊರವಲಯದಲ್ಲಿರುವ ಐತಿಹಾಸಿಕ ಚಂದಾಪುರ ಕೆರೆ ನಿರ್ವಹಣೆ, ಅಭಿವೃದ್ಧಿಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು 500 ಕೋಟಿ ದಂಡ ವಿಧಿಸಿದೆ. ಕರ್ನಾಟಕ ಸರ್ಕಾರದ ಮೇಲೆ ಚಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕೊಳಚೆ ನೀರನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಾಲೆಗಳ ಮೂಲಕ ಕೆರೆಗೆ ಬಿಡಲಾಗುತ್ತಿದೆ ಎಂದು ಎನ್‌ಜಿಟಿ ಸಮಿತಿ ವರದಿ ನೀಡಿದೆ.

LEAVE A REPLY

Please enter your comment!
Please enter your name here

Most Popular

error: Content is protected !!